Karvara: ಕೆಲಸ ಕೊಡಿಸುವುದಾಗಿ 200 ರೂ ವಂಚನೆ – 30 ವರ್ಷಗಳ ಬಳಿಕ ಆರೋಪಿಯ ಬಂಧನ

Karvara: ಸರ್ಕಾರಿ ಕೆಲಸ ಕೊಡಿಸುವುದಾಗಿ 30 ವರ್ಷದ ಹಿಂದೆ 200 ರೂ. ಪಡೆದು ವಂಚಿಸಿದ ಪ್ರಕರಣದಲ್ಲಿ ಬರೋಬ್ಬರಿ 30 ವರ್ಷದ ನಂತರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಷ್ಟೇ ಅಲ್ಲದೆ ನ್ಯಾಯಾಲಯದ ಸುಪರ್ದಿಗೆ ಆತನನ್ನು ವಹಿಸಿದ್ದಾರೆ.

ಬೈಂದೂರಿ ಮೂಲದ ಪ್ರಸ್ತುತ ಬೆಂಗಳೂರಿನ ಬಳೆಪೇಠೆಯಲ್ಲಿ ನೆಲಸಿರುವ ಬಿ.ಕೆ.ರಾಮಚಂದ್ರರಾವ್ ಬಂಧಿತ ಆರೋಪಿ. ಈತನು ಉತ್ತರಕನ್ನಡ ಜಿಲ್ಲೆಯ ಶಿರಸಿ ಪೊಲೀಸ್ ಠಾಣಾ ವ್ಯಾಪ್ತಿಯೊಳಗೆ ಸುಮಾರು ಮೂವತ್ತು ವರ್ಷಗಳ ಹಿಂದೆ ಅಂದರೆ 1990 ರಲ್ಲಿ ಶಿರಸಿಯಲ್ಲಿ ಬಿಳಿಗಿರಿ ಕೊಪ್ಪ ವೆಂಕಟೇಶ ವೈದ್ಯ ಎಂಬಾತನು ಪದವಿ ಓದುತ್ತಿರುವಾಗ ನೀಲಕಂಠ ಹೆಗಡೆ ಎಂಬವರ ಮೂಲಕ ಪರಿಚಯವಾಗಿತ್ತು. ವೆಂಕಟೇಶ್ ಎಂಬಾತನಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ 200 ರೂ. ಗಳನ್ನು ಪಡೆದು ವಂಚಿಸಿ ಪರಾರಿಯಾಗಿದ್ದ. ವಂಚಿಸಿದ್ದನ್ನು ಅಂದಿನ ದೂರುದಾರ ಗಂಭೀರವಾಗಿ ತೆಗೆದುಕೊಂಡು ಶಿರಸಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ, ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ನಾಪತ್ತೆಯಾಗಿದ್ದನು.
ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ 30 ವರ್ಷದಿಂದ ತಲೆಮರೆಸಿಕೊಂಡಿದ್ದ. ಡಿಎಸ್ಪಿ ಗೀತಾ ಪಾಟೀಲ್ ಹಾಗೂ ಶಿರಸಿ ಗ್ರಾಮೀಣ ಠಾಣೆ ಪಿಐ ಮಂಜುನಾಥ್ ಎಂ., ಪಿಎಸ್‌ಐ ಸಂತೋಷ ಕುಮಾರ್ ಎಂ., ಅಶೋಕ್ ರಾಠೊಡ್ ಮಾರ್ಗದರ್ಶನದಂತೆ ಠಾಣೆಯ ರಾಘವೇಂದ್ರ ಜಿ. ಮತ್ತು ಮಾರುತಿ ಗೌಡ ಬೆಂಗಳೂರಿನ ಬಳೆಪೇಟೆಯಲ್ಲಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿ ಕರೆ ತಂದಿದ್ದಾರೆ.
Comments are closed.