B R Patil: ಸಿದ್ದರಾಮಯ್ಯ ಒಬ್ಬ ಅಡ್ಜಸ್ಟ್ಮೆಂಟ್ ರಾಜಕಾರಣಿ – ಕಾಂಗ್ರೆಸ್ ಶಾಸಕನಿಂದಲೇ ಆರೋಪ

Share the Article

B R Patil: ಜೆಡಿಎಸ್‌ನಿಂದ ಬಂದ 8 ಶಾಸಕರಲ್ಲಿ ನಾನು ಒಬ್ಬ. ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದೇವೆ. ಕೆಲವರು ಮಂತ್ರಿಗಳಾಗಿದ್ದಾರೆ. ಸಿದ್ದರಾಮಯ್ಯ ಲಕ್ಕಿ. ಲಾಟರಿ ಹೊಡೆದು ಮುಖ್ಯಮಂತ್ರಿಯಾದ’ ಎಂದು ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಸಿದ್ದರಾಮಯ್ಯ ಅವರ ಕುರಿತು ಮಾತನಾಡಿದ ಆಡಿಯೋ ಒಂದು ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಅವರು ಸಿದ್ದರಾಮಯ್ಯ ಒಬ್ಬ ಅಡ್ಜಸ್ಟ್ಮೆಂಟ್ ರಾಜಕಾರಣಿ ಎಂದು ಹೇಳಿರುವುದು ಕೂಡ ವೈರಲಾಗುತ್ತಿದೆ.

ಹೌದು, ಪ್ರಸ್ತುತ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಡ್ಜಸ್ಟ್‌ಮೆಂಟ್ ರಾಜಕಾರಣ ಮಾಡುತ್ತಿದ್ದಾರೆ. ಮಾಜಿ ಸ್ಪೀಕರ್ ಕೃಷ್ಣ ಅವರು ಇದ್ದಿದ್ದರೆ ‘ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೆಳಗೆ ಇಳಿದು ಬಾರಯ್ಯ’ ಎಂದು ನೇರವಾಗಿ ಹೇಳುತ್ತಿದ್ದರು ಎಂದು ಆಳಂದ ಶಾಸಕ ಬಿ.ಆರ್.ಪಾಟೀಲ್ ಹೇಳಿದ್ದಾರೆ.

ಕೃಷ್ಣ ಪ್ರತಿಷ್ಠಾನದಿಂದ ಆಯೋಜಿಸಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇತ್ತೀಚಿನ ರಾಜಕಾರಣ ನೋಡಿದರೆ ನನ್ನನ್ನು ಸೇರಿಸಿಕೊಂಡಂತೆ ಬಹುತೇಕರಿಗೆ ಕಾಲ ಮುಗಿದು ಹೋಗಿದೆ. ಈಗ ನಡೆಯುತ್ತಿರುವುದು ಪ್ರೀತಿಯ ರಾಜಕಾರಣ ಅಲ್ಲ, ಹಣ ಬಲದ ರಾಜಕಾರಣ ಎಂದು ಬೇಸರ ವ್ಯಕ್ತಪಡಿಸಿದರು.

ಅಲ್ಲದೆ ನಮ್ಮಂತಹವರು ಇಂತಹ ಕೆಟ್ಟ ಪರಿಸ್ಥಿತಿಯಲ್ಲಿ ರಾಜಕಾರಣ ಮಾಡಲು ಸಾಧ್ಯವಿಲ್ಲದಂತಾಗಿದೆ. ಇದನ್ನು ಕೃಷ್ಣ ಅವರು ಕೂಡಾ ಅನುಭವಿಸಿ ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿದ್ದರು. ಇವೆಲ್ಲವನ್ನೂ ಕೃಷ್ಣ ಅವರು ತಮ್ಮ ಪುಸ್ತಕದಲ್ಲಿ ಸ್ವತಃ ತಾವೇ ಬರೆದುಕೊಂಡಿದ್ದಾರೆ. ಈ ಹಿಂದೆ ಕೃಷ್ಣ ಅವರಿಗೆ ಜನರೆ ದುಡ್ಡು ಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದ್ದರು. ಆದರೆ, ಈಗ ಪರಿಸ್ಥಿತಿ ಏನಾಗಿದೆ? ಈಗಿನ ಯಾವ ರಾಜಕೀಯ ಪಕ್ಷಗಳು ಸರಿಯಿಲ್ಲ ಎಂದು ವಿಷಾದಿಸಿದರು.

ಇದನ್ನೂ ಓದಿ: Puttur: ಯುವತಿಯ ನಂಬಿಸಿ, ವಂಚನೆ ಮಾಡಿದ ಪ್ರಕರಣ: ಆರೋಪಿ ತಂದೆ ಆಸ್ಪತ್ರೆಗೆ ದಾಖಲು, ಪೊಲೀಸರಿಂದ ವಿಚಾರಣೆ

Comments are closed.