CM Siddaramiah : ಹೊಡೆಯಲು ಕೈ ಎತ್ತಿ ಅಪಮಾನಿಸಿದ ಪೊಲೀಸ್ ಅಧಿಕಾರಿಗೆ ಸಿಎಂ ಸಿದ್ದರಾಮಯ್ಯ ಕರೆ – ASP ಭರಮನಿಗೆ ಸಿದ್ದು ಹೇಳಿದ್ದೇನು?

Share the Article

CM Siddaramiah : ಕೆಲವು ಸಮಯದ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ (Dharwad ASP Narayana bharamani) ಅವರಿಗೆ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದರು. ಇದರಿಂದ ತೀವ್ರವಾಗಿ ಮನನೊಂದಿರುವ ಬರಮನಿ ಅವರು ಇದೀಗ ಸ್ವಯಂ ನಿವೃತ್ತಿಗೆ (VRS) ಮನವಿ ಮಾಡಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರು ನಾರಾಯಣ ಭರಮನಿ ಅವರಿಗೆ ಫೋನ್ ಮಾಡಿ ಸಮಾಧಾನ ಹೇಳಿದ್ದಾರೆ ಎನ್ನಲಾಗಿದೆ.

ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ನಿನಗೆ ಅಪಮಾನ ಮಾಡುವುದು ನನ್ನ ಉದ್ದೇಶವಾಗಿರಲಿಲ್ಲ. ನಾನು ಬೇಕು ಅಂತ ಮಾಡಿದ ಕೆಲಸವಲ್ಲ. ಸರ್ಕಾರ ನಮ್ಮದೇ ಇದ್ದು ನಮ್ಮ ಪ್ರತಿಭಟನೆಯಲ್ಲಿ ಬಿಜೆಪಿ ಬಂದು ಅಡ್ಡಿಪಡಿಸದ್ದಕ್ಕೆ ನನಗೆ ಬೇಸರವಾಯ್ತು. ಕೋಪದಲ್ಲಿ ಈ ಘಟನೆ ನಡೆದು ಹೋಗಿದೆ. ಹೀಗಾಗಿ ರಾಜೀನಾಮೆ ನಿರ್ಧಾರ ವಾಪಸ್ ಪಡೆದು ಕೆಲಸ ಮುಂದುವರೆಸುವಂತೆ’ ತಿಳಿಸಿದ್ದಾರೆ ಎನ್ನಲಾಗಿದೆ.

ಇನ್ನು ಸಿಎಂ ಕರೆ ಮತ್ತು ರಾಜೀನಾಮಗೆ ಬಗ್ಗೆ ಮಾತನಾಡಿದ ಎಎಸ್‌ಪಿ ನಾರಾಯಣ ಭರಮನಿ, ನಾನು ಶಿಸ್ತಿನ ಇಲಾಖೆಯಲ್ಲಿ ಇದ್ದೇನೆ. ನನ್ನ ಭಾವನೆಗಳನ್ನು ಇಲಾಖೆ ಮೇಲಾಧಿಕಾರಿಗಳಿಗೆ ತಿಳಿಸಿದ್ದೇನೆ. ಮೇಲಾಧಿಕಾರಿಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರಹ ಸಚಿವ ಜಿ ಪರಮೇಶ್ವರ್ ರವರು ನನ್ನ ಜೊತೆಗೆ ಮಾತನಾಡಿದ್ದಾರೆ. ಈಗ ನಾನು ದೈನಂದಿನ ಕೆಲಸಕ್ಕೆ ಹಾಜರಾಗುತ್ತಿದ್ದೇನೆ ರಾಜೀನಾಮೆ ಅಂಗೀಕಾರ ಕುರಿತು ಸರ್ಕಾರ ನಿರ್ಧರಿಸುತ್ತದೆ ನಾನೀಗ ದೈನಂದಿನ ಕೆಲಸಕ್ಕೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Sushma: ಕಿಚ್ಚನ ನಿರ್ಧಾರ ಬದಲಾಗುವಂತೆ ಮಾಡಿದ್ದೆ ಈ ಸುಷ್ಮಾ – ರಿಯಲ್ ಬಿಗ್ ಬಾಸ್ ಇವರೇ ಅಂತೆ ಗುರೂ !!

Comments are closed.