Hijab: ಹಿಜಾಬ್‌ ಧರಿಸಲು ಬಿಡುತ್ತಿಲ್ಲ ಎಂದು ಪರೀಕ್ಷಾ ಕೊಠಡಿಗೆ ನುಗ್ಗಿ ಪ್ರಾಂಶುಪಾಲರಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಗಳು: ಆರು ಮಂದಿ ವಿರುದ್ಧ ಎಫ್‌ಐಆರ್‌

Share the Article

Mumbai: ಪಿಇಎಸ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಹಿಜಾಬ್‌ ಧರಿಸಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಿಲ್ಲ ಎನ್ನುವ ಕಾರಣಕ್ಕೆ ಪ್ರಾಂಶುಪಾಲರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿರುವ ಪೀಪಲ್ಸ್‌ ಎಜುಕೇಶನ್‌ ಸೊಸೈಟಿಯ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ಸೋಮವಾರ ಪೀಪಲ್ಸ್‌ ಎಜುಕೇಶನ್‌ ಸೊಸೈಟಿಯ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಂಶುಪಾಲ ಅಭಿಜಿತ್‌ ವಾಡೇಕರ್‌ ಕಂಟೋನ್ಮೆಂಟ್‌ ಪೊಲೀಸ್‌ ಠಾಣೆಗಳಲ್ಲಿ ಆರೋಪಿಗಳ ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿರುವ ಕುರಿತು ವರದಿಯಾಗಿದೆ.

ಕಾಲೇಜು ಅಧಿಕಾರಿಗಳು ಅಂತಹ ಯಾವುದೇ ನಿಷೇಧ ಹೇರಿಲ್ಲ. ಕಾಲೇಜಿನಲ್ಲಿ ಹಿಜಾಬ್‌ಗೆ ಅವಕಾಶವಿದೆ. ಪರೀಕ್ಷೆಯ ಸಮಯದಲ್ಲಿ ಮಾತ್ರ ಈ ನಿರ್ಬಂಧ ಮಾಡಲಾಗುತ್ತದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳುವಾಗ ತಮ್ಮ ಮುಖವನ್ನು ಕಾಣುವಂತೆ ಇಟ್ಟುಕೊಳ್ಳಬೇಕು ಎಂದು ಪ್ರಾಂಶುಪಾಲರು ಮಾಧ್ಯಮಗಳಿಗೆ ಹೇಳಿದ್ದಾರೆ.

ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲಿ ಮಧ್ಯಾಹ್ನ 1.45 ರ ಹೊತ್ತಿಗೆ ಕಾಲೇಜಿಗೆ ಪ್ರವೇಶ ಮಾಡಿದ ಆರು ಪುರುಷರ ಗುಂಪು ಹಿಜಾಬ್‌ ಧರಿಸಲು ಅವಕಾಶ ನೀಡುತ್ತಿಲ್ಲ ಎಂದು ಕೇಳಿ, ನಂತರ ಅವಾಚ್ಯ ಶಬ್ದಗಳ ನಿಂದನೆ ಮಾಡಿದ್ದಾರೆ. ಘೋಷಣೆಗಳನ್ನು ಕೂಗುತ್ತಾ ಬೆದರಿಕೆ ಹಾಕಿದ್ದಾರೆ ಎಂದು ಪ್ರಾಂಶುಪಾಲರು ಹೇಳಿದರು.

ಇದನ್ನೂ ಓದಿ: Mumbai: ‘ಮಗನ ವೀರ್ಯವನ್ನು ನನಗೆ ನೀಡಿ’ – ಹೈ ಕೋರ್ಟ್ ಮೊರೆ ಹೋದ ತಾಯಿ, ಕೋರ್ಟ್ ಹೇಳಿದ್ದೇನು?

Comments are closed.