D K Shivkumar : ‘5 ವರ್ಷವೂ ನಾನೇ ಸಿಎಂ’ ಎಂದ ಸಿದ್ದರಾಮಯ್ಯ – ‘ನನಗೆ ಬೇರೆ ದಾರಿ ಇಲ್ಲ, ಬೆಂಬಲಿಸುತ್ತೇನೆ’ ಎಂದ ಡಿಕೆಶಿ

Share the Article

D K Shivkumar : ರಾಜ್ಯದಲ್ಲಿ ಆಗಾಗ ಚರ್ಚೆಗೆ ಬರುವ ಸಿಎಂ ಬದಲಾವಣೆ ಗೊಂದಲಕ್ಕೆ ಕೊನೆಗೂ ಹೈಕಮಾಂಡ್‌ ಬ್ರೇಕ್‌ ಹಾಕಿದೆ. ಹೀಗಾಗಿ ನಾನೇ ಮುಂದಿನ 5 ವರ್ಷ ಸಿಎಂ ” ಎಂದು ಸಿದ್ದರಾಮಯ್ಯ ಅವರು ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಅಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿ “ನನ್ನ ಮುಂದೆ ಬೇರೆ ಆಯ್ಕೆ ಇಲ್ಲ, ಬೆಂಬಲ ನೀಡುತ್ತೇನೆ ” ಎಂದು ಹೇಳಿ ಸಿಎಂ ಸ್ಥಾನದಿಂದ ಸದ್ಯಕ್ಕೆ ಹಿಂದಕ್ಕೆ ಸರಿದಿದ್ದಾರೆ.

ಹೌದು, ನಂದಿ ಗಿರಿಧಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, 5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದಿದ್ದಾರೆ. ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್ ನಾನು ಸಿದ್ದರಾಮಯ್ಯ ಬೆನ್ನಿಗೆ ನಿಂತು ಸಹಕಾರ ನೀಡುತ್ತೇನೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾನು ಬಂದ್ಧ ಎಂದು ಡಿಕೆ ಶಿವಕುಮಾರ್ ಹೇಳಿದರು. ಅಲ್ಲದೆ ಲಕ್ಷಾಂತರ ಕಾರ್ಯಕರ್ತರು ಪಕ್ಷವನ್ನು ಬೆಂಬಲಿಸಿದ್ದಾರೆ. ಪಕ್ಷದ ತೀರ್ಮಾನಕ್ಕೆ‌ ನಾನು ಬದ್ಧನಾಗಿರುತ್ತೇನೆ. ಸಿದ್ದರಾಮಯ್ಯನವರು ಸಿಎಂ ಆಗಿದ್ದಾರೆ, ಅಪಸ್ವರ ತೆಗೆಯುವುದು ಬೇಡ ಎಂದು ಬೆಂಬಲಿಗರಿಗೆ ಡಿಕೆ ಶಿವಕುಮಾರ್ ಕಿವಿಮಾತು ಹೇಳಿದ್ದಾರೆ.

ಅಂದಹಾಗೆ ಒಂದೆಡೆ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಬಂದು ಕಾಂಗ್ರೆಸ್ (Congress) ಶಾಸಕರ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸುತ್ತಿದ್ದಾರೆ. ಮತ್ತೊಂದೆಡೆ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ನಾಯಕತ್ವ ಬದಲಾವಣೆ ಕುರಿತ ಹೇಳಿಕೆಗಳು ಮುನ್ನೆಲೆಗೆ ಬಂದಿವೆ. ಇದೇ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಈ ಹೇಳಿಕೆ ನೀಡಿದ್ದು, ಅಚ್ಚರಿ ಮೂಡಿಸಿದೆ.

ಸಿದ್ದರಾಮಯ್ಯ ಐದು ವರ್ಷ ನಾನೇ ಸಿಎಂ ಎಂದ ಬೆನ್ನಲ್ಲೇ ಡಿಕೆಶಿ ಇಂತಹದ್ದೊಂದು ಹೇಳಿಕೆ ನೀಡಿರುವುದು ಈಗ ಚರ್ಚೆಗೆ ಕಾರಣವಾಗಿದೆ. ಹಾಗಿದ್ದರೆ ಡಿಕೆ ಶಿವಕುಮಾರ್ ಕೂಡಾ ಹತಾಶರಾಗಿದ್ದಾರೆಯೇ ಎಂದು ಪ್ರಶ್ನೆ ಮೂಡಿದೆ.

ಇದನ್ನೂ ಓದಿ: Udupi: ಇಂಡಿಯನ್ ಬುಕ್ಸ್ ಆಫ್ ರೆಕಾರ್ಡ್ ಬಿರುದು ಪಡೆದ ಐದು ವರ್ಷದ ಪುಟ್ಟ ಪೋರ

Comments are closed.