Weather Report: ಕರ್ನಾಟಕದ ಹವಾಮಾನ ವರದಿ : ಎಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ?

Share the Article

Weather Report: ಕರಾವಳಿ ಮತ್ತು ಶಿವಮೊಗ್ಗ, ಚಿಕ್ಕಮಗೂರುಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಹಾಸನ, ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ನಾಳೆ ಚಿಕ್ಕಮಗಳೂರು, ಶಿವಮೊಗ್ಗ ಹಾಸನದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಆದರೆ ಜುಲೈ 6ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಬಹುದು. ತೋಟಗಳಿಗೆ ಔಷಧಿ ಸಿಂಪಡಿಸಲು ಇಡೀ ದಿನ ಮಳೆ ಬಿಟ್ಟು ಸಿಗುವ ಸಾಧ್ಯತೆ ಕಾಣಿಸುತ್ತಿಲ್ಲ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗ ಒಂದೆರಡು ಕಡೆ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ, ಯಾದಗಿರಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಬಯಲು ಪ್ರದೇಶದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಮತ್ತು ಬೆಟ್ಟಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ ) ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಜುಲೈ 4ರಿಂದ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಇದನ್ನೂ ಓದಿ: Hasin Jahan On Maintenance: ‘4 ಲಕ್ಷ ತುಂಬಾ ಕಡಿಮೆ’ ಎಂದು ಹಸೀನ್ ಜಹಾನ್: ಮೊಹಮ್ಮದ್ ಶಮಿ ಉತ್ತರವೇನು?

Comments are closed.