Bantwala: ಬಂಟ್ವಾಳ ತಾಲೂಕಿನ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಇಂದು (ಜು.4) ರಜೆ ಘೋಷಣೆ

Bantwala: ಬಂಟ್ವಾಳ ತಾಲೂಕಿನಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ಶುಕ್ರವಾರ (ಜು.4) ರಜೆ ಘೋಷಣೆ ಮಾಡಲಾಗಿದೆ.

ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ತಹಶೀಲ್ದಾರರು ಆದೇಶಿಸಿದ್ದಾರೆ.
ಹೆಚ್ಚಿನ ಮಳೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಮಾಡಲಾಗಿದೆ. ಸಾರ್ವಜನಿಕರು ಕೂಡಾ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.
Comments are closed.