Heart Problem: ಹೃದಯ ಸಮಸ್ಯೆ ಇರುವವರಿಗೆ ಉಚಿತ ಚಿಕಿತ್ಸೆ ನೀಡುವ ಆಸ್ಪತ್ರೆ

Heart Problem: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯ ಕಾರಣದಿಂದ ಹೃದಯ ಸಂಬಂಧಿ ಸಮಸ್ಯೆಗಳು ಇತ್ತೀಚೆಗೆ ಹೆಚ್ಚುತ್ತಿದೆ. ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂ ಮೃತಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಾಸನ ಮಾತ್ರವಲ್ಲದೇ ಪ್ರತಿ ಜಿಲ್ಲೆಯಲ್ಲೂ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ತೀವ್ರವಾಗಿ ಹೆಚ್ಚಿದೆ.
ಹಾಸನ ಜಿಲ್ಲೆಯ ಜನರಿಗೆ ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಮಧುಸೂಧನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ರಾಜ್ಯದ ಮುದ್ದೇನಹಳ್ಳಿಯಲ್ಲಿ 400 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಡೆಸುತ್ತಿದೆ. ಕಳೆದ ನಾಲ್ಕು ವರ್ಷಗಳಿಂದ ಈ ಆಸ್ಪತ್ರೆಯಲ್ಲಿ ಎಲ್ಲಾ ವೈದ್ಯಕೀಯ ಸೇವೆಗಳನ್ನು ಸಂಪೂರ್ಣ ಉಚಿತವಾಗಿ ಒದಗಿಸಲಾಗುತ್ತಿದೆ.
ದೇಶಿಯ ಮತ್ತು ಅಂತರರಾಷ್ಟ್ರೀಯ ಹೃದಯ ತಜ್ಞರು ಈ ಆಸ್ಪತ್ರೆಯ ಹೃದಯ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವಿಶ್ವದರ್ಜೆಯ ಚಿಕಿತ್ಸೆ ನೀಡುವ ಎಲ್ಲಾ ಸೌಲಭ್ಯಗಳು ಇದೆ. ಹಾಸನದಲ್ಲಿ ಹೃದಯ ಸಂಬಂಧಿತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೋಗಿಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಾಗುವ ಕುರಿತು ಏಷ್ಯಾನೆಟ್ ಸುವರ್ಣ ಕನ್ನಡ ವರದಿ ಮಾಡಿದೆ.
ಅಪಾಯಿಂಟ್ಮೆಂಟ್, ಆಸ್ಪತ್ರೆ ವಿವರಗಳು ಹಾಗೂ ಚಿಕಿತ್ಸೆಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳ ಬಗ್ಗೆ ಇಲ್ಲಿದೆ ಮಾಹಿತಿ
ಸಂಪರ್ಕಿಸಬೇಕಾದರ ದೂರವಾಣಿ ಸಂಖ್ಯೆ: 08156 275811 (ಬೆಳಿಗ್ಗೆ 10:00 ರಿಂದ ಸಂಜೆ 4:00 ರವರೆಗೆ).
ಸಂಪೂರ್ಣ ವಿವರಗಳಿಗಾಗಿ ಈ https://smsimsr.org/ ವೆಬ್‌ಸೈಟ್ ಅನ್ನು ಕ್ಲಿಕ್ ಮಾಡಿ.
ಆಸ್ಪತ್ರೆ ವಿಳಾಸ. ಶ್ರೀ ಮಧುಸೂಧನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮುದ್ದೇನಹಳ್ಳಿ, ಸತ್ಯ ಸಾಯಿ ಗ್ರಾಮ, ಚಿಕ್ಕಬಳ್ಳಾಪುರ ಜಿಲ್ಲೆ, ಕರ್ನಾಟಕ
ಇದನ್ನೂ ಓದಿ: Puttur: ಪುತ್ತೂರು :ಹೆರಿಗೆ ಬಳಿಕ ವಿಪರೀತ ರಕ್ತಸ್ರಾವ ಉಂಟಾಗಿ ಮಹಿಳೆ ಮೃತ್ಯು!
Comments are closed.