Chikkamaglur: 10 ದಿನಗಳಿಂದ ನಾಪತ್ತೆಯಾಗಿದ್ದ ‘ಫಾರೆಸ್ಟ್ ಗಾರ್ಡ್’ ಬೆತ್ತಲೆ ಸ್ಥಿತಿಯಲ್ಲಿ ಶವವಾಗಿ ಪತ್ತೆ !!

Share the Article

Chikkamaglur : ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದಲ್ಲಿ 10 ದಿನಗಳಿಂದ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಬೆತ್ತಲೆ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಹೌದು, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಕರ್ತವ್ಯದಲ್ಲಿದ್ದ ಫಾರೆಸ್ಟ್ ಗಾರ್ಡ್ ಶರತ್ ಕುಮಾರ್ (33) ನಾಪತ್ತೆಯಾಗಿದ್ದರು. ನೀಲಗಿರಿ ಪ್ಲಾಂಟೇಶನ್ ನಿಂದ 5 ಕಿಮೀ ದೂರದಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಶರತ್ ಶವ ಪತ್ತೆಯಾಗಿದೆ.

ಶರತ್ ಮೂಲತಃ ಕೊಡಗು ಜಿಲ್ಲೆಯ ಕಾಲೂರು ನಿವಾಸಿಯಾಗಿದ್ದು. ಕಳೆದ ನಾಲ್ಕು ತಿಂಗಳ‌ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ KFDC ವಿಭಾಗದಿಂದ ಸಖರಾಯಪಟ್ಟಣ ಅರಣ್ಯ ಇಲಾಖೆಯ KFDC ವಿಭಾಗಕ್ಕೆ ವರ್ಗಾವಣೆಯಾಗಿದ್ರು. ಸಖರಾಯಪಟ್ಟಣ ನೀಲಗಿರಿ ಪ್ಲಾಂಟೇಶನ್ ನಲ್ಲಿ ನರ್ಸರಿ ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದ ಶರತ್ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವುದು ಅನುಮಾನಕ್ಕೆ ಕಾರಣವಾಗಿದೆ.

ಕೊಡಗಿನಿಂದ 3-4 ತಿಂಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆಗೊಂಡಿದ್ದರು. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: Hassan : ಇದು ರಾಜ್ಯದಲ್ಲಿ ಹೃದಯಘಾತಕ್ಕೆ ಉಚಿತ ಚಿಕಿತ್ಸೆ ನೀಡೋ ಏಕೈಕ ಹಾಸ್ಪಿಟಲ್ – ಇಲ್ಲಿದೆ ನೋಡಿ ವಿಳಾಸ ಮತ್ತು ಹಾಸ್ಪಿಟಲ್ ನಂಬರ್

Comments are closed.