Bengaluru: ನಿರಂತರ ಕಣ್ಣಿನ ಆರೋಗ್ಯ ಒದಗಿಸುವ ‘ಆಶಾಕಿರಣ ದೃಷ್ಟಿ ಕೇಂದ್ರ’ಗಳ ಆರಂಭ: ದಿನೇಶ್ ಗುಂಡೂರಾವ್!

Share the Article

Bengaluru: ದೃಷ್ಟಿದೋಷ ನಿವಾರಣೆಗೆ ಜಾರಿಗೆ ತಂದಿದ್ದ ‘ಆಶಾಕಿರಣ’ ಯೋಜನೆಯನ್ನು ಮರುವಿನ್ಯಾಸಗೊಳಿಸಲಾಗಿದೆ. ಶಾಶ್ವತ ಪರಿಹಾರಕ್ಕಾಗಿ ನಿರಂತರ ಕಣ್ಣಿನ ಆರೋಗ್ಯ ಸೇವೆ ಒದಗಿಸುವ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಾರಂಭಿಸಲಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಈಗಾಗಲೇ 393 ಆಶಾಕಿರಣ ದೃಷ್ಟಿ ಕೇಂದ್ರಗಳು ಕಣ್ಣಿನ ಆರೋಗ್ಯ ಸೇವೆ ಒದಗಿಸಲು ಸಜ್ಜಾಗಿವೆ. ಸಾರ್ವಜನಿಕರು ಕೇಂದ್ರಗಳಿಗೆ ಭೇಟಿ ನೀಡಿ ಕಣ್ಣಿನ ತಪಾಸಣೆ ನಡೆಸಿಕೊಂಡು, ದೃಷ್ಟಿ ದೋಷ ಇರುವವರು ಉಚಿತ ಕನ್ನಡಕಗಳನ್ನು ಪಡೆಯಬಹುದು ಎಂದು ತಿಳಿಸಿದ್ದಾರೆ.‌

Comments are closed.