Puttur: ನಾಪತ್ತೆಯಾಗಿದ್ದ ಪುತ್ತೂರಿನ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆ!

Share the Article

Puttur: ಪುತ್ತೂರು (Puttur) ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ನಾನ ದಂಪತಿ ಪುತ್ರಿ ರೂಪ (19ವ) ಜು.1ರಂದು ನಾಪತ್ತೆಯಾಗಿದ್ದರು. ಇದೀಗ ಅವರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಕುರಿತು ತಿಳಿದು ಬಂದಿದೆ.

ರೂಪ ಅವರ ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ತಂದೆ ಉಡುಪಿಯಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದು, ಮನೆಯಲ್ಲಿ ರೂಪ ಹಾಗೂ ಆಕೆಯ ಸಹೋದರ ಮಾತ್ರ ವಾಸವಿದ್ದರು. ಜು.1 ಜೆರಾಕ್ಸ್ ಮಾಡಿಸಲು ಪೇಟೆಗೆ ಹೋಗಿ ಬರುವುದಾಗಿ ತೆರಳಿದ ರೂಪ ಮನೆಗೆ ಹಿಂತಿರುಗಿಲ್ಲವೆಂದು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು, ಸ್ನೇಹಿತರ ಮನೆಗೂ ತೆರಳದೆ, ಸಂಬಂಧಿಕರ ಮನೆಗೆ ಕೂಡ ಹೋಗದ ಯುವತಿ ನಾಪತ್ತೆಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದ್ದು, ಇದೀಗ ಅವರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: Rashmika Mandanna: ʼಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇʼ- ಮತ್ತೆ ಟ್ರೋಲ್‌ಗೊಳಗಾದ ರಶ್ಮಿಕಾ ಮಂದಣ್ಣ

Comments are closed.