Bangalore: ʼನೈಸ್‌ʼ ಗೆ ವಶಪಡಿಸಿಕೊಂಡಿದ್ದ 300 ಎಕರೆ ಭೂಸ್ವಾಧೀನ ರದ್ದು: ಹೈಕೋರ್ಟ್‌ ಆದೇಶ

Share the Article

Bangalore: ಬೆಂಗಳೂರು-ಮೈಸೂರು ನಡುವೆ 111 ಕಿ.ಮೀ. ಉದ್ದ ಎಕ್ಸ್‌ಪ್ರೆಸ್‌ ವೇ ನಿರ್ಮಾಣಕ್ಕೆ ನಂದಿ ಇನ್‌ಫ್ರಾಸ್ಟ್ರಕ್ಚರ್‌ ಕಾರಿಡಾರ್‌ ಎಂಟರ್‌ಪ್ರೈಸಸ್‌ ಲಿಮಿಟೆಡ್‌ (ನೈಸ್‌) ಗೆ ನೀಡಲು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ವಶಪಡಿಸಿಕೊಂಡಿದ್ದ ಸುಮಾರು 3 ಎಕರೆಗೂ ಹೆಚ್ಚು ಜಮೀನಿನ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಹೈಕೋರ್ಟ್‌ ರದ್ದು ಪಡಿಸಿದೆ.

ಪಿ.ಶ್ರೀಧರ ಮೂರ್ತಿ ಸೇರಿ 50 ಕ್ಕೂ ಹೆಚ್ಚು ಭೂ ಮಾಲೀಕರು ಪ್ರತ್ಯೇಕ ರಿಟ್‌ ಅರ್ಜಿಗಳನ್ನು ಸಲ್ಲಿಕೆ ಮಾಡಿದ್ದು, ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್‌.ದೇವದಾಸ್‌ ಅವರಿದ್ದ ಏಕ ಸದಸ್ಯ ಪೀಠದಿಂದ ಈ ಆದೇಶ ನೀಡಲಾಗಿದೆ. ರಾಜ್ಯ ಹೈಕೋರ್ಟ್‌ ವಿಭಾಗೀಯ ಪೀಠ ಮತ್ತು ಸುಪ್ರೀಂಕೋರ್ಟ್‌ ನೀಡಿರುವ ತೀರ್ಪಿನ ಆಧಾರದ ಮೇಲೆ ಭೂಸ್ವಾಧೀನ ರದ್ದು ಪಡಿಸಲಾಗಿದೆ ಎಂದು ಹೈಕೋರ್ಟ್‌ ತಿಳಿಸಿದೆ.

Comments are closed.