Prostitution: ಮೈಸೂರು: ಹೈಟೆಕ್ ವೇಶ್ಯಾವಾಟಿಕೆ ದಂಧೆ: 8 ಜನ ಅರೆಸ್ಟ್!

Share the Article

Prostitution: ವೇಶ್ಯಾವಾಟಿಕೆ (Prostitution) ನಡೆಯುತಿದ್ದ ಮನೆಯ ಮೇಲೆ ಪೊಲೀಸರು ದಾಳಿ ಮಾಡಿ 6 ಜನ ಪುರುಷರು, ಇಬ್ಬರು ಮಹಿಳೆಯರನ್ನ ವಶಕ್ಕೆ ಪಡೆದಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ.

ಮೈಸೂರು ತಾಲೂಕಿನ ದಾಸನಕೊಪ್ಪಲು ಗ್ರಾಮದ ಮನೆಯಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ (Police Raid) ನಡೆಸಿದ್ದಾರೆ. ಈ ವೇಳೆ 6 ಜನ ಪುರುಷರು ಇಬ್ಬರು ಮಹಿಳೆಯರು ಸಿಕ್ಕಿಬಿದ್ದಿದ್ದಾರೆ.

ಬಂಧಿತರು ಇಬ್ಬರು ಹೆಣ್ಣು ಮಕ್ಕಳನ್ನು ಕರೆದಂದು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಆರೋಪಿಗಳು 30 ದಿನಗಳಿಗೆ ಒಮ್ಮೆ ಮನೆ ಬದಲಾಯಿಸಿ ವೇಶ್ಯಾವಾಟಿಗೆ ದಂಧೆ ನಡೆಸುತ್ತಿದ್ದರು. ಬೇರೆ ಬೇರೆ ಕಡೆಗಳಿಂದ ಯುವತಿಯರಿಗೆ ಹಣ ಕೊಟ್ಟು ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು.

ಇದನ್ನೂ ಓದಿ: ಸರ್ಕಾರಿ ಶಾಲೆಗಳಲ್ಲಿಯೂ ಇನ್ನು ಮುಂದೆ ಯುನಿಟ್ ಟೆಸ್ಟ್!

Comments are closed.