Suicide: ಶಾಲಾ ಮುಖ್ಯ ಶಿಕ್ಷಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ!

Suicide: ಶಾಲಾ ಮುಖ್ಯ ಶಿಕ್ಷಕನೋರ್ವ ಶಾಲೆಗೆ ಹೋಗುವ ಸಂದರ್ಭದಲ್ಲಿ ಬೈಕ್ ನಿಲ್ಲಿಸಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿದ್ಧಾಪುರದ ಹಳ್ಳಿಹೊಳೆ ಗ್ರಾಮದಲ್ಲಿ ನಡೆದಿದೆ.

ಸುಳ್ಗೋಡು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕುಬೇರ ಧರ್ಮ ನಾಯಕ್ ಅಲಿಯಾಸ್ ಕುಬೇರಪ್ಪ ಆತ್ಮಹತ್ಯೆಗೊಳಗಾದ ಶಿಕ್ಷಕ.
ಇವರು ಚಿಟ್ ಫಂಡ್ ನಲ್ಲಿ ಸಾಲ ಮಾಡಿಕೊಂಡಿದ್ದರು. ಆ ಸಾಲಪತ್ರವು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೂ ಬಂದಿತ್ತು ಎನ್ನಲಾಗಿದೆ. ಆದರೆ ಅವರ ಈ ದುಡುಕಿನ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ. ಇವರು 22 ವರ್ಷ ಬೈಂದೂರು ವಲಯದಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Mangalore: ಡಿಪ್ಲೋಮಾ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
Comments are closed.