Shivamogga: ದೆವ್ವ ಬಿಡಿಸುವುದಾಗಿ ಹಿಗ್ಗ ಮುಗ್ಗ ಥಳಿತ – ಮಹಿಳೆ ಸಾವು!!

Shivamogga : ರಾಜ್ಯದಲ್ಲಿ ಮತ್ತೊಂದು ಆಘಾತಕಾರಿ ಘಟನೆಯೊಂದು ನಡೆದಿದ್ದು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ಭಾನುವಾರ ರಾತ್ರಿ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸಲಾಗಿದೆ. ಇದರಿಂದ ತೀವ್ರಗೊಂಡ ಮಹಿಳೆ ಸೋಮವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ.

ಜಂಬರಗಟ್ಟೆ ಗ್ರಾಮದ ಗೀತಮ್ಮ (45) ಮೃತ ಮಹಿಳೆ. ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಗೀತಮ್ಮನನ್ನು ದೆವ್ವ ಹಿಡಿದಿದೆ ಎಂದು ಕರೆದುಕೊಂಡು ಹೋಗಿದ್ದ. ಈ ವೇಳೆ ದೆವ್ವಾ ಬಿಡಿಸುತ್ತೇನೆ ಎಂದು ಆಶಾ ಎಂಬ ಮಹಿಳೆ ಗೀತಮ್ಮನಿಗೆ ಕೋಲಿನಿಂದ ಹಿಗ್ಗಾಮುಗ್ಗ ಭಾರಿಸಿ ಚಿತ್ರಹಿಂಸೆ ನೀಡಿದ್ದಾಳೆ. ಅಲ್ಲದೆ ಮೇಲೆ ದೊಡ್ಡ ಗಾತ್ರದ ಕಲ್ಲು ಹೊರಿಸಿ ಪಕ್ಕದ ಕಾಲುವೆಯಲ್ಲಿದ್ದ ತಣ್ಣೀರು ಎರಚಿದರು. ಚಳಿ ತಾಳಲಾಗದೇ ನಡುಗುತ್ತಿದ್ದ ಅಮ್ಮ ಕುಸಿದು ಬಿದ್ದರು. ಆಗ ಗೀತಮ್ಮನ ಮೈಯಲ್ಲಿದ ಆತ್ಮ ಹೊರಹೋಗಿದೆ. ಮುಂದೆ ಯಾವುದೇ ತೊಂದರೆ ಇಲ್ಲ. ಎಲ್ಲವೂ ಸರಿಯಾಗಿದೆ ಎಂದು ಹೇಳಿದ್ದ ಆಶಾ ಅವರನ್ನು ಮನೆಗೆ ಕಳಿಸಿದ್ದಾರೆ. ಈ ವೇಳೆ ತೀವ್ರ ಅಸ್ವಸ್ಥವಾಗಿದ್ದ ಅವರನ್ನು ಹೊಳೆಹೊನ್ನೂರಿನ ಸಮುದಾಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತಾಗಿ ದೇವರು ನೀಡಿರುವ ಗೀತಮ್ಮನ ಮನೆಯವರು ‘ಗೀತಮ್ಮನ ಮೈಯಲ್ಲಿ ಆತ್ಮವೊಂದು ಹೊಕ್ಕಿದೆ. ಪೂಜೆ ಮಾಡಿ ಅದನ್ನು ಹೊರ ಹಾಕುತ್ತೇನೆ ಎಂದು ಆಶಾ ತಿಳಿಸಿದ್ದರು. ಹೀಗಾಗಿ ಅವರ ಮನೆಗೆ ಕರೆದೊಯ್ದಿದ್ದೆವು. ಮೊದಲಿಗೆ ದೇವರ ಪೂಜೆ ಮಾಡಿದ್ದರು. ನಂತರ ದೆವ್ವ ಓಡಿಸುವೆ ಎಂದು ತಲೆ ಮೇಲೆ ಕಲ್ಲು ಹೊರಿಸಿ ಗ್ರಾಮದ ಹೊರಗಿನ ಮರವೊಂದರ ಬಳಿಗೆ ಕರೆದೊಯ್ದರು. ಮರದ ಟೊಂಗೆಯೊಂದನ್ನು ಕಿತ್ತುಕೊಂಡು ಅಲ್ಲಿ ಮನಬಂದಂತೆ ಥಳಿಸಿದರು. ತಲೆ ಮೇಲೆ ದೊಡ್ಡ ಗಾತ್ರದ ಕಲ್ಲು ಹೊರಿಸಿ ಪಕ್ಕದ ಕಾಲುವೆಯಲ್ಲಿದ್ದ ತಣ್ಣೀರು ಎರಚಿದರು. ಚಳಿ ತಾಳಲಾಗದೇ ನಡುಗುತ್ತಿದ್ದ ಅಮ್ಮ ಕುಸಿದು ಬಿದ್ದರು’ ಎಂದು
ತಿಳಿಸಿದ್ದಾರೆ.
ಪ್ರಕರಣ ಮುಚ್ಚಿ ಹಾಕಲು ಯತ್ನ?
ದೆವ್ವ ಬಿಡಿಸುವ ನೆಪದಲ್ಲಿ ನಡೆದ ಹಲ್ಲೆಯಿಂದ ಗೀತಾ ಬೆಳಗಿನ ಜಾವವೇ ಸಾವಿಗೀಡಾಗಿದ್ದಾರೆ. ಈ ವಿಚಾರ ಹರಡುತ್ತಿದ್ದಂತೆಯೇ ಊರಿನ ಕೆಲವರು ಪಂಚಾಯ್ತಿ ನಡೆಸಿದ್ದು ‘ಪೊಲೀಸರಿಗೆ ದೂರು ಕೊಡುವುದು ಬೇಡ ಎಂದು ಸೂಚಿಸಿದ್ದರು. ಬದಲಿಗೆ ಗೀತಮ್ಮ ಅವರ ಕುಟುಂಬಕ್ಕೆ ಆರೋಪಿ ಆಶಾ ಅವರಿಂದ ₹ 50000 ಪರಿಹಾರ ಕೊಡಿಸುವ ತೀರ್ಮಾನ ತೆಗೆದುಕೊಂಡಿದ್ದರು. ಹೀಗಾಗಿ ಸೋಮವಾರ ಸಂಜೆಯವರೆಗೂ ಪ್ರಕರಣ ದಾಖಲಾಗಿರಲಿಲ್ಲ. ಆ ನಿರ್ಣಯಕ್ಕೆ ಒಪ್ಪದೇ ಗೀತಾ ಮನೆಯವರು ದೂರು ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಂಬರಗಟ್ಟೆ ಗ್ರಾಮದಲ್ಲಿ ಗ್ರಾಮದೇವತೆ ಚೌಡಮ್ಮ ಆಗಾಗ ತಮ್ಮ ಮೈಮೇಲೆ ಬರುವುದಾಗಿ ಆಶಾ ಮಾತ್ರವಲ್ಲದೇ ಇನ್ನೂ ಮೂವರು ನಂಬಿಸಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: Nobel Peace Prize: ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಹೆಸರು ನಾಮ ನಿರ್ದೇಶನ ಮಾಡಿದ ಇಸ್ರೇಲ್
Comments are closed.