PM-KISAN: ರೈತರು ಈ ಕೆಲಸವನ್ನು ಆದಷ್ಟು ಬೇಗ ಮುಗಿಸಿಕೊಳ್ಳಿ – ಪಿ.ಎಂ ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

PM-KISAN: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಹಾಗೂ ಮುಂದಿನ ದಿನಗಳಲ್ಲಿ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಆರ್ಥಿಕ ನೆರವು ವರ್ಗಾವಣೆಯಾಗಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.

ರೈತ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್ ಹಾಗೂ ಆಧಾರ್‌ಗೆ ಜೋಡಣೆ ಯಾಗಿರುವ ಮೊಬೈಲ್ ನಂಬರ್ ಹೊಂದಿರುವ ಮೊಬೈಲ್ ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಸಿ), ಪೋಸ್ಟ್ ಆಫೀಸ್, ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು.
ಇ-ಕೆವೈಸಿ ಯನ್ನು http://pmkisan.gov.in ಪೋರ್ಟಲ್‌ನಲ್ಲಿ ಗ್ರಾಮ ಒನ್ ಸೇವಾ ಕೇಂದ್ರ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಆಧಾರಿತ ಹಾಗೂ ಒಟಿಪಿ ಆಧಾರಿತ ಇ-ಕೆವೈಸಿ ಯನ್ನು ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅಪ್‌ಡೇಟ್ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ.
ಇ-ಕೆವೈಸಿ ಮಾಡಿಸಿಕೊಂಡ ರೈತರಿಗೆ ಮಾತ್ರ ಆಗಸ್ಟ್-ನವೆಂಬರ್ 2025ರ ಚತು ರ್ಮಾಸಿಕದಲ್ಲಿ ಬಿಡುಗಡೆ ಯಾಗುವ ಮುಂದಿನ ಕಂತಿನ ಆರ್ಥಿಕ ನೆರವು ದೊರೆಯುತ್ತದೆ. ಜಿಲ್ಲೆಯ ಎಲ್ಲಾ ಅರ್ಹ ರೈತ ಫಲಾನುಭವಿಗಳು ಪಿಎಂ ಕಿಸಾನ್ ಆರ್ಥಿಕ ನೆರವು ಪಡೆಯಲು ತುರ್ತಾಗಿ ಇ-ಕೆವೈಸಿ ಅಪ್‌ಡೇಟ್ ಮಾಡಿಸಿಕೊಳ್ಳಬೇಕಿದೆ.
ರೈತ ಬಾಂಧವರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಅಥವಾ ಒಟಿಪಿ ಮೂಲಕ ಇ-ಕೆವೈಸಿ ಮಾಡಿಸಬಹುದು. ಇದಲ್ಲದೇ ಪಿ.ಎಂ ಕಿಸಾನ್ ಮೊಬೈಲ್ ಆಪ್ ಬಳಿಸಿ ಮುಖ ಚಹರೆ ಮೂಲಕವು ಇ-ಕೆವೈಸಿ ಮಾಡಿಸಿಕೊಂಡು ಯೋಜನೆಯ ಸದುಪಯೋಗಪಡಿಸಿಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರಾದ ಎಸ್. ಎಸ್. ಅಬೀದ್ ಪ್ರಕಟಣೆಯಲ್ಲಿ ಕೋರಿದ್ದಾರೆ.
Comments are closed.