Prajwal Revanna: ಅತ್ಯಾಚಾರ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್..!

Share the Article

Prajwal Revanna: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರದ ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಆರೋಪದ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ, ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇತ್ಯರ್ಥಗೊಳಿಸಿದೆ.

 

ಹೌದು, ಮನೆ ಕೆಲಸದಾಕೆ ಮೇಲೆ ಅತ್ಯಾಚಾರದ ದೂರಿನ ಕೇಸ್‌ಗೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ವಿಚಾರಣಾಧೀನ ನ್ಯಾಯಾಲಯ ಅಂದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲು ಸೂಚನೆ ನೀಡಿದ್ದು, ಪ್ರಜ್ವಲ್ ರೇವಣ್ಣ ಸಲ್ಲಿಸುವ ಜಾಮೀನು ಅರ್ಜಿಯನ್ನು 10 ದಿನಗಳೊಳಗೆ ನಿರ್ಧರಿಸಲು ತಿಳಿಸಿದೆ.

 

ಜಾಮೀನು ಅರ್ಜಿ ಸಲ್ಲಿಸಿದ ಹತ್ತು ದಿನಗಳಲ್ಲಿ ನಿರ್ಧರಿಸಲು ವಿಚಾರಣಾಧೀನ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದ್ದರಿಂದ ಪ್ರಜ್ವಲ್​ಗೆ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಯಾಕಂದ್ರೆ, ಜಾಮೀನು ಅರ್ಜಿ ವಿಚಾರಣೆ ಪದೇ ಪದೇ ಮುಂದೆ ಹೋಗುತ್ತಲೇ ಇತ್ತು. ಆದ್ರೆ, ಇದೀಗ ಹೈಕೋರ್ಟ್​ 10 ದಿನದಲ್ಲೇ ನಿರ್ಧರಿಸುವಂತೆ ಹೇಳಿದ್ದರಿಂದ ಎಲ್ಲೋ ಒಂದು ಕಡೆ ಪ್ರಜ್ವಲ್​ಗೆ ಜಾಮೀನು ಸಿಗುವ ಆಶಾಭಾವನೆ ಮೂಡಿದ್ದು, ಜಾಮೀನು ಸಿಗುತ್ತಾ ಇಲ್ವಾ ಎಂದು ಅರ್ಜಿ ಸಲ್ಲಿಸಿದ ಹತ್ತೇ ದಿನಗಳಲ್ಲಿ ತಿಳಿಯಲಿದೆ.

 

ಇನ್ನು ಕಳೆದ ವರ್ಷ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಗಳು ಹಾಸನದಲ್ಲಿ ಸಂಚಲ ಸೃಷ್ಟಿಸಿತ್ತು. ಆ ಬಳಿಕ ಪ್ರಜ್ವಲ್ ವಿದೇಶಕ್ಕೆ ತೆರಳಿ ತಲೆಮರಿಸಿಕೊಂಡಿದ್ದರು. ಅಂತಿಮವಾಗಿ ತಾವಗೀಯೇ ವಾಪಸ್ ಆದ ಪ್ರಜ್ವಲ್ ಪೊಲೀಸರಿಗೆ ಶರಣಾಗಿ ವಿಚಾರಣೆಗೆ ಒಳಪಟ್ಟಿದ್ದರು.

Comments are closed.