CM Siddaramiah : ಕೇಂದ್ರ ಸರ್ಕಾರಕ್ಕೆ 7 ಬೇಡಿಕೆಗಳ ಪಟ್ಟಿ ಸಲ್ಲಿಸಿದ CM ಸಿದ್ದರಾಮಯ್ಯ- ಇಲ್ಲಿದೆ ಲಿಸ್ಟ್

CM Siddaramiah : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೈಕಮಾಂಡ್ ಬೇಟಿಗಾಗಿ ದೆಹಲಿಗೆ ತೆರಳಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು ಬುಧವಾರ ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಸುಮಾರು ಏಳು ಬೇಡಿಕೆಗಳನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ. ಹಾಗಿದ್ದರೆ ಏನು ಆ 7 ಬೇಡಿಕೆ ಬೇಡಿಕೆಗಳು. ಇಲ್ಲಿದೆ ನೋಡಿ ಡಿಟೈಲ್ಸ್

ಕೇಂದ್ರಕ್ಕೆ ಸಿಎಂ ಬೇಡಿಕೆ ಪಟ್ಟಿ:
1. ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋ ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ಅನುಮತಿ ನೀಡಿ.
2. ಉತ್ತರ ಪ್ರದೇಶ, ತಮಿಳುನಾಡಿನಲ್ಲಿ ಡಿಫೆನ್ಸ್ ಕಾರಿಡಾರ್ ಇದೆ. ಅದೇ ರೀತಿ ಕರ್ನಾಟಕದಲ್ಲೂ ಡಿಫೆನ್ಸ್ ಕಾರಿಡಾರ್ ಸ್ಥಾಪಿಸಿ.
3. ಬೈಯ್ಯಪ್ಪನಹಳ್ಳಿ ರೈಲ್ವೆ ಜಂಕ್ಷನ್ ಸಂಪರ್ಕಿಸುವ ರೋಟರಿ ಪ್ಲೈ ಓವರ್ ಯೋಜನೆಗೆ ರಕ್ಷಣಾ ಇಲಾಖೆಯ ಭೂಮಿ ಬೇಕಿದ್ದು, ಭೂಮಿ ಹಸ್ತಾಂತರಕ್ಕೆ ಅನುಮತಿ ನೀಡಿ.
4. ಈಜಿಪುರ ಜಂಕ್ಷನ್ ಮೂಲಕ ಕೆಳ ಅಗ್ರಹಾರ ರಸ್ತೆ (ಸರ್ಕಾರಿ ಆಸ್ಪತ್ರೆ ಸಮೀಪ) ಮತ್ತು ಸರ್ಜಾಪುರ ರಸ್ತೆ ಸಂಪರ್ಕಿಸುವ ರಸ್ತೆಯ 24 ಮೀಟರ್ ಅಗಲೀಕರಣಕ್ಕೆ ಯೋಜಿಸಿದ್ದು, ಇದಕ್ಕೆ ರಕ್ಷಣಾ ಇಲಾಖೆಯ ಭೂಮಿ ಬೇಕಿದೆ. ಭೂಮಿ ಹಸ್ತಾಂತರಕ್ಕೆ ಅನುಮತಿ ನೀಡಿ.
5. ಹೆಬ್ಬಾಳದ ಎಸ್ಟೀಮ್ ಮಾಲ್‌ನಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗೆ ಸುರಂಗ ಮಾರ್ಗ ನಿರ್ಮಿಸುವ ಪ್ರಸ್ತಾವನೆಯಿದೆ. ಇದಕ್ಕೆ ಹೆಬ್ಬಾಳದ ಬಳಿ ರಕ್ಷಣಾ ಇಲಾಖೆಗೆ ಸೇರಿದ 2.039ಎಕರೆ ಭೂಮಿ ಬೇಕಿದ್ದು, (ಹೆಬ್ಬಾಳ ಡಿಫೆನ್ಸ್ ಡೈರಿ ಫಾರ್ರ್ಮಗೆ ಸೇರಿದ ಭೂಮಿ) ಇದರ ಹಸ್ತಾಂತರಕ್ಕೆ ಅನುಮತಿ ನೀಡಿ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುಗಮ ಸಂಚಾರ ಕಲ್ಪಿಸಲು ಇದು ಸಹಕಾರಿ.
6. ಏರ್‌ಪೋರ್ಟ್ ರಸ್ತೆ (ಬಳ್ಳಾರಿ ರಸ್ತೆ) ಯಿಂದ ಸರೋವರ ಲೇಔಟ್‌ಗೆ ಲಿಂಕ್ ರೋಡ್ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ ಹಸ್ತಾಂತರಕ್ಕೆ ಅನುಮತಿ ಕೊಡಿ.
7. ಗೊರಗುಂಟೆಪಾಳ್ಯ ಬಳಿ ಮೆಟ್ರೋ ಫೇಸ್-3ಗಾಗಿ ಡಬಲ್ ಡೆಕ್ಕರ್ ಪ್ಲೈ ಓವರ್ ನಿರ್ಮಾಣಕ್ಕೆ ಅಗತ್ಯವಿರುವ (0.3 ಎಕ್ರೆ) ಭೂಮಿ ಹಸ್ತಾಂತರಕ್ಕೆ ಅನುಮತಿ ನೀಡಿ.
ಇನ್ನು ಭೇಟಿಯ ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ತಿಳಿಸಿದರು.
ಇದನ್ನೂ ಓದಿ: Bhavana Ramanna: ನಟಿ ಭಾವನಾ IVF ಗೆ ದಕ್ಷಿಣ ಭಾರತದ ವ್ಯಕ್ತಿಯ ವೀರ್ಯವೇ ಬೇಕೆಂದಿದ್ದು ಯಾಕೆ?
Comments are closed.