CM Siddaramiah: DCM ರನ್ನು ಹೆಚ್ಚಿನ ಶಾಸಕರು ಬೆಂಬಲಿಸಲ್ಲ, ಕೆಲವರು ಮಾತ್ರ – ಪರೋಕ್ಷವಾಗಿ ಡಿಕೆಶಿ ಸಿಎಂ ಆಗಲ್ಲ ಎಂದ ಸಿದ್ದರಾಮಯ್ಯ

CM Siddaramiah : 5 ವರ್ಷ ನಾನೇ ಸಿಎಂ ಆಗಿರುತ್ತೇನೆ. ಕೆಲವು ಶಾಸಕರು ಮಾತ್ರ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಸುತ್ತಾರೆ. ಅವರಿಗೆ ಹೆಚ್ಚಿನ ಶಾಸಕರ ಬೆಂಬಲ ಇಲ್ಲ ಎಂದು ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹೌದು, ರಾಜ್ಯದಲ್ಲಿ ಆಗಾಗ ಚರ್ಚೆಗೆ ಬರುವ ಸಿಎಂ ಬದಲಾವಣೆ ಗೊಂದಲಕ್ಕೆ ಕೆಲವು ದಿನಗಳ ಹಿಂದೆ ಹೈಕಮಾಂಡ್ ಬ್ರೇಕ್ ಹಾಕಿತ್ತು. ಹೀಗಾಗಿ ನಾನೇ ಮುಂದಿನ 5 ವರ್ಷ ಸಿಎಂ ” ಎಂದು ಸಿದ್ದರಾಮಯ್ಯ ಅವರು ಬಹಿರಂಗವಾಗಿ ಘೋಷಣೆ ಮಾಡಿದ್ದರು. ಇತ್ತ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಅಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿ “ನನ್ನ ಮುಂದೆ ಬೇರೆ ಆಯ್ಕೆ ಇಲ್ಲ, ಬೆಂಬಲ ನೀಡುತ್ತೇನೆ ” ಎಂದು ಹೇಳಿ ಸಿಎಂ ಸ್ಥಾನದಿಂದ ಸದ್ಯಕ್ಕೆ ಹಿಂದಕ್ಕೆ ಸರಿದಿದ್ದರು. ಇದರ ಬೆನ್ನಲ್ಲೇ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮತ್ತೆ 5 ವರ್ಷ ನಾನೇ ಸಿಎಂ ಆಗಿರುತ್ತೇನೆ. ಡಿಕೆ ಶಿವಕುಮಾರ್ ಅವರನ್ನು ಹೆಚ್ಚಿನ ಶಾಸಕರೇನು ಬೆಂಬಲಿಸಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ಡಿ ಕೆ ಶಿ ಸದ್ಯಕ್ಕೆ ಸಿಎಂ ಆಗುವುದಿಲ್ಲ ಎಂದು ಸಿಎಂ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಯಸ್, ರಾಷ್ಟ್ರೀಯ ಮಾಧ್ಯಮದ ಸಂದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದು, ಕೆಲವು ಶಾಸಕರು ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸುತ್ತಿದ್ದಾರೆ. ಹೆಚ್ಚಿನ ಶಾಸಕರೇನೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸಿಲ್ಲ. ಅಧಿಕಾರ ಹಂಚಿಕೆಯ ಬಗ್ಗೆ ಯಾವ ಚರ್ಚೆಯು ಕೂಡ ಆಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೆಯೋ ನಾನು ಅದಕ್ಕೆ ಬದ್ಧನಾಗಿದ್ದೇನೆ. ನಾನಾಗಲಿ ಡಿಸಿಎಂ ಡಿಕೆ ಶಿವಕುಮಾರ್ ಆಗಲಿ ಹೈಕಮಾಂಡ್ ಹೇಳುವುದನ್ನು ಪಾಲನೆ ಮಾಡಲೇಬೇಕು. ಡಿಕೆ ಶಿವಕುಮಾರ್ ಕೂಡ ಸಿಎಂ ಬದಲಾಗಲಿ ಅಂತ ಹೇಳಿಕೆ ಕೊಟ್ಟೆ ಇಲ್ಲ 2028ರಲ್ಲೂ ನಾನೇ ಪಕ್ಷವನ್ನು ಮುನ್ನಡೆಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.
Comments are closed.