Home News Dinesh Gundurao: ಹಾಸನದಲ್ಲಿ ನಡೆದ ಹೃದಯಾಘಾತ ಪ್ರಕರಣಗಳಿಗೆ ಕಾರಣವೇನು? ಆರೋಗ್ಯ ಸಚಿವರಿಂದ ಸ್ಫೋಟಕ ಮಾಹಿತಿ

Dinesh Gundurao: ಹಾಸನದಲ್ಲಿ ನಡೆದ ಹೃದಯಾಘಾತ ಪ್ರಕರಣಗಳಿಗೆ ಕಾರಣವೇನು? ಆರೋಗ್ಯ ಸಚಿವರಿಂದ ಸ್ಫೋಟಕ ಮಾಹಿತಿ

Hindu neighbor gifts plot of land

Hindu neighbour gifts land to Muslim journalist

Dinesh Gundurao: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಾಗಿದ್ದು, ತಾಂತ್ರಿಕ ಸಮಿತಿ ಸದಸ್ಯರು ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಸಲ್ಲಿಕೆ ಮಾಡಲಾಗಿದೆ. ತಾಂತ್ರಿಕ ಸಮಿತಿ ಸದಸ್ಯರ ಜೊತೆ ಸಚಿವರು ಸಭೆ ನಡೆಸಿ, ನಂತರ ಸುದ್ದಿಗೋಷ್ಠಿ ನಡೆಸಿದ ದಿನೇಶ್‌ ಗುಂಡೂರಾವ್‌ ಅವರು, ಹಾಸನದಲ್ಲಿ ಜನರು ಹೃದಯಾಘಾತದಿಂದ ಸಾವಿಗೀಡಾಗಿರುವುದಕ್ಕೆ ಕಾರಣ ಮಧುಮೇಹ, ಮದ್ಯಪಾನ, ಕುಟುಂಬದ ಹಿನ್ನೆಲೆ ಎಂದು ವರದಿ ಮೂಲಕ ತಿಳಿದು ಬಂದಿದೆ ಎಂದು ಹೇಳಿರುವ ಕುರಿತು ವರದಿಯಾಗಿದೆ.

ಈ ವರ್ಷ 20 ಜನರ ಸಾವಾಗಿದೆ. ಆತಂಕ ಪಡುವ ಸಂಗತಿ ಇಲ್ಲ. ಚಿಕ್ಕ ವಯಸ್ಸಿನವರಿಗೆ ಹೃದಯಾಘಾತವಾಗುತ್ತಿದ್ದು ಗಂಭೀರ ವಿಚಾರ. ಚಿಕ್ಕ ವಯಸ್ಸಿನವರು ಹೃದಯಾಘಾತದಿಂದ ಸಾವಿಗೀಡಾಗುತ್ತಿರುವುದಕ್ಕೆ ಅತಿಯಾದ ಬೊಜ್ಜು ಕಾರಣ ಎನ್ನುವುದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ.

ಹೃದಯಾಘಾತಕ್ಕೆ ಚಾಲಕರೇ ಹೆಚ್ಚು ಬಲಿಯಾಗುತ್ತಿದ್ದಾರೆ. ಆಟೋ, ಕ್ಯಾಬ್‌ ಚಾಲಕರ ಮೇಲೆ ಗಮನ ಹರಿಸುತ್ತಿದ್ದೇವೆ. ಆಟೋ, ಕ್ಯಾಬ್‌ ಚಾಲಕರಿಗೆಂದು ಪ್ರತ್ಯೇಕ ತಪಾಸಣೆ ಮಾಡಲು ಸಲಹೇ ನೀಡುತ್ತೇನೆ. ಸ್ಕ್ರೀನಿಂಗ್‌ ಮಾಡಿಸಲು ಚಾಲಕರ ಸಂಘದ ಜೊತೆ ಮಾತುಕತೆ ಮಾಡುತ್ತೇವೆ. ಮೃತಪಟ್ಟವರಲ್ಲಿ ಧೂಮಪಾನ, ಮದ್ಯಪಾನ ಮಾಡುವ ಅಭ್ಯಾಸ ಇತ್ತು. ಹೃದಯಾಘಾತಕ್ಕೂ ಕೊರೋನಾಗೂ ಸಂಬಂಧ ಇಲ್ಲವೆಂದು ಹೇಳಲಾಗಿದೆ ಎಂದು ಹೇಳಿದರು.

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಸಿಜಿ ಅಳವಡಿಸಲು ತಜ್ಞರ ಸಲಹೆ ನೀಡಿದ್ದಾರೆ. ಹೃದಯ ಜ್ಯೋತಿ ಯೋಜನೆ ವಿಸ್ತರಣೆ ಮಾಡುವ ಆಲೋಚನೆ ಇದೆ. ಸಿಪಿಆರ್‌ ತರಬೇತಿ ನೀಡುವಂತೆ ಹೃದ್ರೋಗ ತಜ್ಞರು ಸಲಹೆ ನೀಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Bipasha Basu: ನಟನೆಯಿಂದ ದೂರವಿರುವ ಬಿಪಾಶಾ ಬಸು ಈ ಕೆಲಸ ಮಾಡುತ್ತಿದ್ದಾರೆ, ಅದು ಯಾರಿಗೂ ಗೊತ್ತಿಲ್ಲ!