Shubhanshu Shukla: ಗಗನಯಾತ್ರಿ ಶುಭಾಂಶು ಶುಕ್ಲಾ ಜು.14ಕ್ಕೆ ಭೂಮಿಗೆ ವಾಪಸ್‌!

Share the Article

Shubhanshu Shukla: ಎರಡು ವಾರಗಳಿಗೂ ಹೆಚ್ಚು ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಮಯ ಕಳೆದ ನಂತರ, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla) ಭೂಮಿಗೆ ಮರಳಲಿದ್ದಾರೆ. ಆಕ್ಸಿಯಮ್ -4 (ಆಕ್ಸ್ -4) ಮಿಷನ್ ಗಗನಯಾತ್ರಿಗಳು ಜುಲೈ 14 ರಂದು ಐಎಸ್‌ಎಸ್‌ನಿಂದ ಹಿಂತಿರುಗಲಿದ್ದಾರೆ ಎಂದು ನಾಸಾ ಗುರುವಾರ ಪ್ರಕಟಿಸಿದೆ.

ಅನ್‌ಡಾಕ್ ಮಾಡುವ ಟಾರ್ಗೆಟ್ ಜುಲೈ 14 ಆಗಿದೆ ಎಂದು ನಾಸಾ ಕಮರ್ಷಿಯಲ್ ಕ್ರೂ ಪ್ರೋಗ್ರಾಂನ ವ್ಯವಸ್ಥಾಪಕ ಸ್ಟೀವ್ ಸ್ಟಿಚ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜೂನ್ 25 ರಂದು ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಆಕ್ಸಿಯಮ್-4 ಮಿಷನ್ ಉಡಾವಣೆಗೊಂಡಿತು. 28 ಗಂಟೆಗಳ ಪ್ರಯಾಣದ ನಂತರ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಮರುದಿನ ಬಾಹ್ಯಾಕಾಶ ನಿಲ್ದಾಣ ತಲುಪಿತು.

ಶುಭಾಂಶು ಶುಕ್ಲಾ, ಪೆಗ್ಗಿ ವಿಟ್ಸನ್, ಸ್ಲಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ ಮತ್ತು ಟಿಬೋರ್ ಕಾಪು ಅವರನ್ನೊಳಗೊಂಡ ಗಗನಯಾತ್ರಿಗಳು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) 230 ಸೂರ್ಯೋದಯಗಳನ್ನು ಕಂಡಿದ್ದಾರೆ.

ಇದನ್ನೂ ಓದಿ: Mangaluru: ಮಂಗಳೂರು: ಲಂಚ ಸ್ವೀಕರಿಸಿದ ಐವರು ಪೊಲೀಸರು ಅಮಾನತು!

Comments are closed.