Mangaluru: ಮಂಗಳೂರು: ಲಂಚ ಸ್ವೀಕರಿಸಿದ ಐವರು ಪೊಲೀಸರು ಅಮಾನತು!

Share the Article

Mangaluru: ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಪಡಿಸಿಕೊಳ್ಳಲಾಗಿದ್ದ ಕಾರೊಂದರ ದಾಖಲೆಯನ್ನು ದೂರುದಾರರಿಗೆ ವಾಪಾಸ್‌ ನೀಡಲು 50 ಸಾವಿರ ರೂ. ಲಂಚದ ಕೇಳಿರುವ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಸುಧೀ‌ರ್ ಕುಮಾ‌ರ್ ರೆಡ್ಡಿ ಆದೇಶಿಸಿದ್ದಾರೆ.

ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ ತಸ್ಲಿಂ ಹಾಗೂ ಸಹಕರಿಸಿದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತು ಮಾಡಲಾಗಿದೆ.

ತಸ್ಲಿಂ ಮತ್ತು ವಿನೋದ್ ಲಂಚ ಬೇಡಿಕೆ ಬಗ್ಗೆ ಮಾಹಿತಿ ಗೊತ್ತಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಮೌನವಹಿಸಿದ್ದ ಇತರ ಮೂವರನ್ನೂ ಕೂಡಾ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಲಂಚದ ಬೇಡಿಕೆ ಇಟ್ಟಿದ್ದ ಕದ್ರಿ ಸಂಚಾರ ಠಾಣೆಯ ಸಿಬ್ಬಂದಿ ಗುರುವಾರ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ತಸ್ಲಿಂ ಕದ್ರಿ ಸಂಚಾರ ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಆಗಿದ್ದರು. ದೂರುದಾರರಿಂದ 5,000 ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಇದನ್ನೂ ಓದಿ: Shirdi Temple: ಶಿರಡಿ ದೇವಸ್ಥಾನಕ್ಕೆ ಅನಾಮಧೇಯ ಭಕ್ತನಿಂದ 59 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ ಸೇರಿ ಚಿನ್ನದ ಹೂವು, ಬೆಳ್ಳಿಯ ಹಾರ ದಾನ .

Comments are closed.