CM Siddaramiah : ಡಿಕೆಶಿ ವಿರುದ್ಧ ಚುನಾವಣೆಯಲ್ಲಿ ಗೆದ್ದು ನಾನು ಸಿಎಂ ಆಗಿದ್ದೇನೆ – ಇದುವರೆಗೂ ಮುಚ್ಚಿಟ್ಟಿದ್ದ ಅಚ್ಚರಿ ವಿಚಾರ ಬಹಿರಂಗ ಪಡಿಸಿದ ಸಿಎಂ ಸಿದ್ದರಾಮಯ್ಯ

Share the Article

CM Siddaramiah : 5 ವರ್ಷ ನಾನೇ ಸಿಎಂ ಆಗಿರುತ್ತೇನೆ. ಕೆಲವು ಶಾಸಕರು ಮಾತ್ರ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಸುತ್ತಾರೆ. ಅವರಿಗೆ ಹೆಚ್ಚಿನ ಶಾಸಕರ ಬೆಂಬಲ ಇಲ್ಲ ಎಂದು ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಇದನ್ನೆಲ್ಲ ಇದೀಗ ಸಿದ್ದರಾಮಯ್ಯ ಅವರು ಅಚ್ಚರಿ ವಿಚಾರವನ್ನು ಬಹಿರಂಗಪಡಿಸಿದ್ದು ಡಿಕೆಶಿ ವಿರುದ್ಧ ಚುನಾವಣೆಯಲ್ಲಿ ಗೆದ್ದು ನಾನು ಸಿಎಂ ಆಗಿದ್ದೇನೆ ಎಂದು ಹೇಳಿದ್ದಾರೆ.

 

ಹೌದು, ನಾಯಕತ್ವಕ್ಕಾಗಿ ಡಿ.ಕೆ. ಶಿವಕುಮಾರ್ ಮತ್ತು ನನ್ನ ನಡುವೆ ನಡೆದ ಚುನಾವಣೆಯಲ್ಲಿ ಗೆದ್ದು ನಾನು ಮುಖ್ಯಮಂತ್ರಿ ಆಗಿದ್ದೇನೆ. ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿ ಅಧಿಕಾರ ಪೂರ್ಣಗೊಳಿಸುತ್ತೇನೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ನನ್ನ ನಡುವೆ ಯಾವುದೇ ಒಪ್ಪಂದ ಆಗಿಲ್ಲ ಇಂದು ಸಿದ್ದರಾಮಯ್ಯ ಅವರು ಹೇಳಿರುವುದು ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

 

ರಾಜ್ಯದಲ್ಲಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ವೇಳೆ ಆಂತರಿಕ ಚುನಾವಣೆ ನಡೆಯಿತು ಎಂಬುದನ್ನು ಕೂಡ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಬಹಿರಂಗಪಡಿಸಿದ್ದು, ಭಾರೀ ಸಂಚಲನ ಮೂಡಿಸಿದೆ. ಮಾತನಾಡಿದಾಗಲೂ ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದಾಗ ಹಿಂದೆ ನಮ್ಮಿಬ್ಬರ ನಡುವೆ ಚುನಾವಣೆ ನಡೆಸಿದ್ದರು. ನಾನು ಆಗ ಗೆದ್ದಿದ್ದೇನೆ. ಡಿಕೆಶಿಯಾಗಲಿ, ಶಾಸಕರಾಗಲಿ ಮುಖ್ಯಮಂತ್ರಿ ಆಗುವ ಆಸೆ ಪಡುವುದು ತಪ್ಪಲ್ಲ. ಆದರೆ, ಸಿಎಂ ಕುರ್ಚಿ ಖಾಲಿ ಇಲ್ಲ. ನಾಯಕತ್ವ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ.

Comments are closed.