Mandya: ಮೂರುವರೆ ವರ್ಷದ ಕಂದಮ್ಮನ ಮೇಲೆ ಬಲತ್ಕಾರ: 50 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ಪ್ರಕಟ!

Share the Article

Mandya: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದಲ್ಲಿ ಮೂರುವರೆ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಲೇ.ಚಿಕ್ಕಣ್ಣ ಪುತ್ರ ಶಿವಣ್ಣ (50) ಎಂಬ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಹಾಗೂ 2ನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಒಂದು ಲಕ್ಷ ರೂಪಾಯಿ ದಂಡವನ್ನೂ ವಿಧಿಸಿದೆ.

ಅಪರಾಧಿಯು ಕಳೆದ 2023ರ ಡಿಸೆಂಬರ್ 11ರಂದು ಅದೇ ಗ್ರಾಮದ ಮನೆ ಬಳಿ ಆಟವಾಡುತ್ತಿದ್ದ ಮೂರುವರೆ ವರ್ಷದ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದನು.

Comments are closed.