Bengaluru: ಬೀದಿ ನಾಯಿಗಳಿಗೆ ತಯಾರಿಸಿದ ಭಕ್ಷ್ಯದ ಬಗ್ಗೆ ಬಿಬಿಎಂಪಿ ಸ್ಪಷ್ಟನೆ!

Share the Article

Bengaluru: ಬೀದಿ ನಾಯಿಗಳಿಗೆ (Stray Dogs) ವಿಶೇಷವಾಗಿ ತಯಾರಿಸಿದ ಭಕ್ಷ್ಯ ನೀಡುತ್ತಿಲ್ಲ. ಇದು ಮಾನವ ದರ್ಜೆಯ ಆಹಾರವಲ್ಲ, ಇದು ನಾಯಿ ದರ್ಜೆಯ ಆಹಾರ ಎಂದು ಬಿಬಿಎಂಪಿ (BBMP) ಸ್ಪಷ್ಟನೆ ನೀಡಿದೆ.

ಬೀದಿನಾಯಿಗಳಿಗೆ ಚಿಕನ್ ರೈಸ್ (Chicken Rice) ಭಾಗ್ಯದ ಕುರಿತು ಅನಿಮಲ್ ಹಸ್ಬೆಂಡ್ರಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಿಬಿಎಂಪಿ ಪ್ರಕಟಣೆ ಹೊರಡಿಸಿದೆ. ಈ ಊಟಕ್ಕೆ ಹೆಸರಿಲ್ಲ. ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ.

ಕೋಳಿ ಮಾಂಸದ ತ್ಯಾಜ್ಯವನ್ನು ಬಳಸಿ ಆಹಾರ ಸಿದ್ಧಪಡಿಸಿ ಬೀದಿ ನಾಯಿಗಳಿಗೆ ನೀಡಲಾಗುವುದು. ಚಿಕನ್ ರೈಸ್, ಚಿಕನ್ ಬಿರಿಯಾನಿ ಎಂದು ನಮೂದಿಸಿಲ್ಲ. ಸಸ್ಯಾಹಾರವನ್ನು ಬೀದಿ ನಾಯಿಗಳು ತಿನ್ನುವುದಿಲ್ಲ. ಹಾಗಾಗಿ, ಮಾಂಸಾಹಾರ ನೀಡಲಾಗುತ್ತಿದೆ.

ನಗರದ ಕೆಲವು ಕಡೆ ಬೀದಿ ನಾಯಿಗಳ ಹಿಡಿದು ಸಂತಾನಹರಣ ಶಸ್ತ್ರ ಚಿಕಿತ್ಸೆ, ಆ್ಯಂಟಿರೇಬಿಸ್ ಲಸಿಕೆಹಾಕುವುದು ಕಷ್ಟವಾಗಿದೆ. ಆಹಾರ ವಿತರಣೆಯಿಂದ ಆ ನಾಯಿಗಳನ್ನು ಹಿಡಿದು ಎಬಿಸಿ ಹಾಗೂ ಎಆರ್‌ವಿಗೆ ಸಹಕಾರಿಯಾಗಲಿದೆ. ಬೀದಿ ನಾಯಿಗಳಿಗೆ ಆಹಾರ ದೊರೆಯುವುದರಿಂದ ನಾಯಿಗಳ ಆಕ್ರಮಣಶೀಲತೆ ಕಡಿಮೆಯಾಗಲಿದೆ.

ಅಗತ್ಯವಿರುವ ಕಡೆ ಮಾತ್ರ ಆಹಾರ ವಿತರಣೆ ಮಾಡಲಾಗುವುದು. ಪ್ರತಿ ಒಂದು ನಾಯಿಗೆ ದಿನದ ಆಹಾರಕ್ಕೆ 11 ರೂ. ವೆಚ್ಚ ಮಾಡಲಾಗುತ್ತಿದೆ. ಆಹಾರ ಸಾಗಾಣಿಕೆ ವೆಚ್ಚ, ಸ್ವಚ್ಛತೆ, ಜಿಎಸ್‌ಟಿ ಸೇರಿದಂತೆ ಒಟ್ಟು ವೆಚ್ಚ 22.42 ರೂ. ಆಗಲಿದೆ. ಭಾರತ ಪ್ರಾಣಿ ಕಲ್ಯಾಣ ಮಂಡಳಿಯ ಕೈಪಿಡಿ, ಸಂಶೋಧನೆಯ ಶಿಫಾರಸು ಆಧಾರಿಸಿ ಆಹಾರ ವಿತರಣೆ ಯೋಜನೆ ರೂಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Comments are closed.