Model San Rachel: ಖ್ಯಾತ ಮಾಡಲ್, 26ರ ಕೃಷ್ಣ ಸುಂದರಿ ಸ್ಯಾನ್ ರಾಚಲ್ ನಿಧನ!!

Model San Rachel : ಕೃಷ್ಣ ಸುಂದರಿ ಎಂದೇ ಎಲ್ಲೆಡೆ ಫೇಮಸ್ ಆಗಿದ್ದ ಖ್ಯಾತ ಮಾಡೆಲ್ ಸ್ಯಾನ್ ರಾಚೆಲ್ ಬದುಕಿಗೆ ಗುಡ್ ಬಾಯ್ ಹೇಳಿದ್ದಾರೆ. ತನ್ನ ತಂದೆಯ ಮನೆಗೆ ಹೋಗಿ ಬಂದ ನಂತರ ರಾಚೆಲ್ ಅತೀಯಾದ ಮಾತ್ರೆಗಳನ್ನು ಸೇವಿಸಿ ಸಾವಿಗೆ ಶರಣಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಹೌದು, ಮನರಂಜನಾ ಉದ್ಯಮದಲ್ಲಿ ವರ್ಣಭೇದ ನೀತಿಯ ವಿರುದ್ಧದ ದಿಟ್ಟ ನಿಲುವಿಗೆ ಹೆಸರುವಾಸಿಯಾಗಿದ್ದ 26 ವರ್ಷದ ಮಾಡೆಲ್ ಸ್ಯಾನ್ ರೆಚಲ್ ಭಾನುವಾರ ಪುದುಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಇತ್ತೀಚೆಗಷ್ಟೇ ವಿವಾಹವಾಗಿದ್ದರು. ಪೊಲೀಸ್ ಮೂಲಗಳ ಪ್ರಕಾರ, ಸ್ಯಾನ್ ರೆಚಲ್ ತನ್ನ ತಂದೆಯ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯ ಮಾತ್ರೆಗಳನ್ನು ಸೇವಿಸಿದ್ದಾರೆ ಎನ್ನಲಾಗಿದೆ.
ಆರಂಭದಲ್ಲಿ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ನಂತರ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ, ಅಂತಿಮವಾಗಿ ಅವರನ್ನು ಜವಾಹರಲಾಲ್ ಇನ್‌ಸ್ಟಿಟ್ಯೂಟ್ ಆಫ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಕಪ್ಪು ಮೈಬಣ್ಣ ಹೊಂದಿರುವ ಇವರು ಮಾಡೆಲಿಂಗ್ ಕ್ಷೇತ್ರದಲ್ಲಿ ಮಿಸ್ ಬೆಸ್ಟ್ ಆಟಿಟ್ಯೂಡ್ 2019, ಮಿಸ್ ಡಾರ್ಕ್ ಕ್ವೀನ್ ತಮಿಳುನಾಡು 2019, ಮಿಸ್ ಪುದುಚೇರಿ 2020, ಕ್ವೀನ್ ಆಫ್ ಚೆನ್ನೈ- 2023 ಹಾಗೂ 2023 MISS AFRICA GOLDEN INDIA ಸ್ಪರ್ಧೆಯಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇದಲ್ಲದೆ, ಯುವತಿಯರಿಗೆ ಮಾಡೆಲಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡುವ ಬಗ್ಗೆ ತರಬೇತಿ ಕೇಂದ್ರವನ್ನೂ ಅವರು ನಡೆಸುತ್ತಿದ್ದರು.
ಇದನ್ನೂ ಓದಿ: Lakshmi Hebbalkar: ರಾಜಕೀಯದ ಜೊತೆಗೆ ‘ಕನ್ನಡ ಚಿತ್ರರಂಗ’ದತ್ತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Comments are closed.