Women’s Commission: ಧರ್ಮಸ್ಥಳ ಅಪರಾಧಗಳ ಕುರಿತ ತನಿಖೆಗೆ ವಿಶೇಷ ತಂಡ ರಚಿಸಿ – ಸರ್ಕಾರಕ್ಕೆ ಮಹಿಳಾ ಆಯೋಗ ಆಗ್ರಹ

Women’s Commission: ಧರ್ಮಸ್ಥಳ ಸುತ್ತಮುತ್ತ ನಡೆದ ಹತ್ತಾರು ಅತ್ಯಾಚಾರ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಆ ಹೆಣಗಳನ್ನು ತಾನೇ ಹೂತು ಹಾಕಿದ್ದು ಎಂದು ಹೇಳಿದ್ದ ಅನಾಮಿಕ ವ್ಯಕ್ತಿ ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಸಧ್ಯ ಪ್ರಕರಣ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಧರ್ಮಸ್ಥಳ ಗ್ರಾಮದ ಅಪರಾಧ ಕೃತ್ಯಗಳ ಬಗ್ಗೆ ವಿಸ್ತೃತ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಹೌದು, ಅನಾಮಿತ ವ್ಯಕ್ತಿಯೊಬ್ಬ ಧರ್ಮಸ್ಥಳದ ಅಪರಾಧಗಳ ಕುರಿತು ಪತ್ರ ಬರೆದು ಸಂಚಲನ ಸೃಷ್ಟಿಸಿದ್ರು. ಸಾಕ್ಷಿ ದೂರುದಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಬಂದು ಹೇಳಿಕೆ ನೀಡಿದ ಬಳಿಕವೂ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣಿಸಿರಲಿಲ್ಲ. ಇದೀಗ ಮಹಿಳಾ ಆಯೋಗ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿ ಸೂಕ್ತ ತನಿಖೆ ನಡೆಸುವಂತೆ ಕೇಳಿಕೊಂಡಿದ್ದಾರೆ. ಅಲ್ಲದೆ, ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಏಳು ದಿನಗಳೊಳಗೆ ಘಟನೆಯ ಬಗ್ಗೆ ವರದಿ ನೀಡುವಂತೆ ಪತ್ರ ಬರೆಯಲಾಗಿದೆ.
ಅಲ್ಲದೆ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ಎಷ್ಟು ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಅದರಲ್ಲಿ ಎಷ್ಟು ಜನರ ಪತ್ತೆ ಮಾಡಲಾಗಿದೆ. ಪತ್ತೆ ಮಾಡಲಾಗದ ಪ್ರಕರಣಗಳು ಎಷ್ಟು? ಆಸ್ವಾಭಾವಿಕವಾದ ಸಾವು/ ಕೊಲೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮ ಮತ್ತು ಅತ್ಯಾಚಾರ ಪ್ರಕರಣಗಳ ವಿವರವನ್ನು ಈ ಪತ್ರ ತಲುಪಿದ 7 ದಿನದೊಳಗೆ ಮಹಿಳಾ ಆಯೋಗಕ್ಕೆ ಕಳುಹಿಸುವಂತೆ ಪತ್ರದಲ್ಲಿ ಆಗ್ರಹಿಸಲಾಗಿದೆ.
Comments are closed.