Home News Tumkur: ‘ಕಾಂಗ್ರೆಸ್ ಏನ್ ದಬ್ಬಾಕಿರೋದು?..’ – ಬೆಳಗ್ಗೆಯಷ್ಟೇ ಸಿದ್ದು ಸರ್ಕಾರ ಟೀಕಿಸಿದ್ದ ಮಹಿಳಾ ಅಧಿಕಾರಿ...

Tumkur: ‘ಕಾಂಗ್ರೆಸ್ ಏನ್ ದಬ್ಬಾಕಿರೋದು?..’ – ಬೆಳಗ್ಗೆಯಷ್ಟೇ ಸಿದ್ದು ಸರ್ಕಾರ ಟೀಕಿಸಿದ್ದ ಮಹಿಳಾ ಅಧಿಕಾರಿ ಸಂಜೆ ಹೊತ್ತಿಗೆ ಎತ್ತಂಗಡಿ!

Hindu neighbor gifts plot of land

Hindu neighbour gifts land to Muslim journalist

Tumkur : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹಿಳಾ ಅಧಿಕಾರಿಯೊಬ್ಬರ ವಿರುದ್ಧ ತಕ್ಷಣದ ಕ್ರಮ ಕೈಗೊಳ್ಳಲಾಗಿದೆ.

ಹೌದು, ಪಾವಗಡ ಉಪ ನೋಂದಣಾಧಿಕಾರಿ ರಾಧಮ್ಮ ಮಾತನಾಡಿದ್ದ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಆ ವಿಡಿಯೋದಲ್ಲಿ ರಾಧಮ್ಮ ಕಾಂಗ್ರೆಸ್ ಏನ್ ದಬ್ಬಾಕಿರೋದು? ಗಾಂಧಿಜೀ ಹೆಂಡತಿ ಮುಸ್ಲಿಂ, ಇಂದಿರಾಗಾಂಧಿ ಗಂಡ ಮುಸ್ಲಿಂ, ಸಂಪೂರ್ಣ ಅಧಿಕಾರ ಕಾಂಗ್ರೆಸ್‌ಗೆ ಕೊಟ್ಟಿದ್ರೆ ಇಷ್ಟೋತ್ತಿಗೆ ದೇಶವನ್ನು ಧೂಳಿಪಟ ಮಾಡಿ ನಮಗೆ ಕುಡಿಯೋಕೆ ನೀರು ಸಿಗ್ತಿರಲಿಲ್ಲ. ಸಿದ್ದರಾಮಯ್ಯ ಎಲ್ಲವನ್ನು ಫ್ರೀಯಾಗಿ ಹೆಣ್ಣು ಮಕ್ಕಳಿಗೆ ಕೊಟ್ಟ, ಎಲ್ಲಾ ದರ ಜಾಸ್ತಿ ಮಾಡಿ ಬರೆ ಎಳೆದು ಕುರಿಸಿದ್ರು. ತರಕಾರಿ, ಹಣ್ಣು, ಹಾಲು, ಮಕ್ಕಳು ತಿನ್ನುವ ಬಿಸ್ಕೆಟ್, ಬೆಳೆ ಕಾಳು ಎಲ್ಲ ಒನ್ ಟು ಡಬಲ್ ಆಗಿದೆ. ಸಿದ್ದರಾಮಯ್ಯ ಆರ್ಟಿಕಲ್ ಹೇಳದೇ ಇರೋದು ಒಂದೇ 150 ಆರ್ಟಿಕಲ್ ಹೇಳೋದು ಒಂದೇಯಾ. ಹೆಂಗಸರು ಮನೆಲಿ ಇರದೇ ಬೀದಿ ಸುತ್ತುವ ಹಾಗೇ ಮಾಡಿದ್ದೆ ಸಿದ್ದರಾಮಯ್ಯ ಎಂದು ಮಾತನಾಡಿ ಅವಹೇಳನ ಮಾಡಿದ್ದಾರೆ.

ಅಲ್ಲದೆ ಈ ಮೊದಲು ಉಪ ನೋಂದಣಾಧಿಕಾರಿ ರಾಧಮ್ಮ ಅವರು ಜಮೀನು ಮತ್ತು ನಿವೇಶನಗಳ ಖಾತೆ ನೋಂದಣಿ ವಿಚಾರದಲ್ಲಿ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಎರಡು ದಿನಗಳ ಹಿಂದಷ್ಟೇ ರೈತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಇಲಾಖೆಯ ಪ್ರತಿ ಕೆಲಸಕ್ಕೂ ಲಂಚ ಪಡೆಯಲಾಗುತ್ತಿದೆ ಮತ್ತು ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿದ್ದರು. ಈ ಭ್ರಷ್ಟಾಚಾರದ ಆರೋಪದ ವಿವಾದ ತಣ್ಣಗಾಗುವ ಮುನ್ನವೇ, ರಾಧಮ್ಮ ಅವರು ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗ್ಯಾರಂಟಿ ಯೋಜನೆ ಬಗ್ಗೆ ಮಹಿಳಾ ಅಧಿಕಾರಿಯ ಟೀಕೆ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರದ ಬೆನ್ನಲ್ಲೇ ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಇಲ್ಲಿನ ಉಪ ನೋಂದಣಾಧಿಕಾರಿ ರಾಧಮ್ಮ ಅವರನ್ನು ಎತ್ತಗಂಡಿ ಮಾಡಿ ಜಿಲ್ಲಾ ಕೇಂದ್ರದ ಕಚೇರಿಗೆ ನಿಯೋಜಿಸಿದ್ದಾರೆ.

ಇದನ್ನೂ ಓದಿ: Mangalore: MRPL ವಿಷಾನಿಲ ಸೋರಿಕೆ ಪ್ರಕರಣ: ಎಂಆರ್‌ಪಿಎಲ್‌ ದಿಗ್ಬಂಧನದಲ್ಲಿದ್ದ ಐವರು ಸಿಬ್ಬಂದಿ ರಕ್ಷಣೆ, ಮಂಗಳೂರು ಕಡೆ ಪಯಣ