Karkala: ಕಾರ್ಕಳ ಪರಶುರಾಮನ ವಿಗ್ರಹ ಪ್ರಕರಣ: ಚಾರ್ಜ್‌ಶೀಟ್‌ ಸಲ್ಲಿಕೆ

Share the Article

Karkala: ಬೈಲೂರು ಗ್ರಾಮದ ಉಮಿಕಲ್‌ ಬೆಟ್ಟದ ಮೇಲೆ 10 ಕೋಟಿ ರೂ ವೆಚ್ಚದಲ್ಲಿ ಸ್ಥಾಪನೆ ಮಾಡಲಾಗಿರುವ 35 ಅಡಿ ಎತ್ತರದ ಪರಶುರಾಮ ದೇವರ ವಿಗ್ರಹ ಕೊನೆಗೂ ನಕಲಿ ಎಂದು ಸಾಬೀತಾಗಿದ್ದು, ಈ ಕುರಿತು ಶಿಲ್ಪಿ ಮತ್ತು ಉಡುಪಿ ನಿರ್ಮಿತಿ ಕೇಂದ್ರದ ಇಬ್ಬರು ಅಧಿಕಾರಿಗಳ ಮೇಲೆ ಕಾರ್ಕಳ ತಾಲೂಕು ನ್ಯಾಯಾಲಯದಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

2024 ರಲ್ಲಿ ಕೃಷ್ಣ ಶೆಟ್ಟಿ ಎಂಬುವವರು ನೀಡಿದ ದೂರಿನಂತೆ ಪ್ರಕರಣದ ತನಿಖೆ ಆಗುತ್ತಿದೆ. ಉಡುಪಿ ನಿರ್ಮಿತಿ ಕೇಂದ್ರಕ್ಕೆ ಬೆಂಗಳೂರಿನ ಕ್ರಿಶ್‌ ಆರ್ಟ್‌ ವರ್ಲ್ಡ್‌ನ ಶಿಲ್ಪಿ ಕೃಷ್ಣ ನಾಯ್ಕ್‌ ಅವರು ಕಂಚಿನ ಪರಶುರಾಮ ಮೂರ್ತಿಯನ್ನು ಸ್ಥಾಪನೆ ಮಾಡಲು ಹಣ ನೀಡಿತ್ತು. ಆದರೆ ಹಿತ್ತಾಳೆಯಿಂದ ವಿಗ್ರಹ ನಿರ್ಮಾಣ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.

ನಿರ್ಮಿತಿ ಯೋಜನಾ ನಿರ್ದೇಶಕ ಅರುಣ್‌ ಕುಮಾರ್‌ ಮತ್ತು ಎಂಜಿನಿಯರ್‌ ಸಚಿನ್‌ ವೈ ಕುಮಾರ್‌ ಅವರು ವಿಗ್ರಹ ನಿರ್ಮಾಣದ ವರ್ಕ್‌ ಅರ್ಡರ್‌ನಲ್ಲಿದ್ದ ಷರತ್ತುಗಳನ್ನು ಪಾಲಿಸಿರಲಿಲ್ಲ. ಕಾರ್ಕಳ ಪೊಲೀಸರು ಶಿಲ್ಪಿ ಕೃಷ್ಣ ನಾಯ್ಕ್‌, ನಿರ್ಮಿತಿ ಕೇಂದ್ರದ ಅರುಣ ಕುಮಾರ್‌ ಹಾಗೂ ಸಚಿನ್‌ ವೈ ಕುಮಾರ್‌ ಅವರು ಒಳಸಂಚು, ನಂಬಿಕೆ ದ್ರೋಹ ಮತ್ತು ವಂಚನೆ ಎಸಗಿ ಸಾಕ್ಷಿ ನಾಶ ಮಾಡಿದ್ದಾರೆ ಎಂದು ಅವರ ವಿರುದ್ಧ ಕಾರ್ಕಳ ತಾಲೂಕು ನ್ಯಾಯಾಲಯಕ್ಕೆ 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಕೆ ಮಾಡಿದ್ದಾರೆ.

Comments are closed.