Chamarajanagar: ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಚಕ್ರಪಾಣಿ ಅಮಾನತು

Chamarajanagara: ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಅವರನ್ನು ಅಮಾನತು ಮಾಡಿ ರಾಜ್ಯ ಸರಕಾರ ಆದೇಶಿಸಿದೆ.

ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಮೇಲ್ನೋಟಕ್ಕೆ ಡಿಸಿಎಫ್ ಚಕ್ರಪಾಣಿ ಅವರ ಕರ್ತವ್ಯಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಸರಕಾರದ ಅಧೀನ ಕಾರ್ಯದರ್ಶಿ ವಿ ಪ್ರಸನ್ನಕುಮಾರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಜೂನ್ ತಿಂಗಳವರೆಗೆ ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಪಾವತಿಸದಿರುವುದು ಡಿಸಿಎಫ್ ಚಕ್ರಪಾಣಿ ಅವರ ಮೂಲಭೂತ ಕರ್ತವ್ಯಲೋಪವಾಗಿದ್ದು, ಇದು ಗಸ್ತು ಕಾರ್ಯಕ್ಕೆ ಹಿನ್ನಡೆ ಉಂಟು ಮಾಡಿದೆ. ಸಕಾಲದಲ್ಲಿ ವೇತನ ಸಿಗದೇ ಇರುವುದರಿಂದ ಸಿಬ್ಬಂದಿ ಕರ್ತವ್ಯ ವಿಮುಖರಾಗಲು ಕಾರಣವಾಗಿದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಗಸ್ತು ಸಿಬ್ಬಂದಿಗೆ ಗುತ್ತಿಗೆದಾರನ ಮೂಲಕ ಮೂರು ತಿಂಗಳ ವೇತನ ಪಾವತಿ ಮಾಡಿಸುವಲ್ಲಿ ಡಿಸಿಎಫ್ ಚಕ್ರಪಾಣಿ ವಿಫಲಗೊಂಡಿದ್ದಾರೆ.
ಉನ್ನತ ಮಟ್ಟದ ತನಿಖಾ ಸಮಿತಿಯು ಅರಣ್ಯ, ಪರಿಸರ ಇಲಾಖೆಗೆ ಕಳುಹಿಸಿರುವ ವರದಿಯಲ್ಲಿ ಡಿಸಿಎಫ್ ಕರ್ತವ್ಯ ನಿರ್ಲಕ್ಷ್ಯ ಕಾರಣ ಎಂದು ತಿಳಿಸಿದೆ. ಈ ಎಲ್ಲಾ ಅಂಶಗಳನ್ನು ಆಧರಿಸಿ ಮಲೆ ಮಹದೇಶ್ವರ ವನ್ಯಜೀವಿ ಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ವೈ ಚಕ್ರಪಾಣಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: Ballari: ಬಳ್ಳಾರಿ: ಶಾಲೆಗೆ ತೆರಳುತ್ತಿದ್ದ ಬಾಲಕಿ ಹಠಾತ್ ಕುಸಿದು ಬಿದ್ದು ಸಾವು
Comments are closed.