Madhya Pradesh: ಕೆಲಸ ಮಾಡುವ ರೀತಿ ಫೋಸ್‌ ಕೊಡೋಕೆ ಹೋಗಿ ಹೊಂಡಕ್ಕೆ ಬಿದ್ದ ಸಾಮಾಜಿಕ ಕಾರ್ಯಕರ್ತ

Share the Article

Madhya Pradesh: ವ್ಯಕ್ತಿಯೊಬ್ಬರು ಸಾಮಾಜಿಕ ಸೇವೆಯ ಫೋಸ್‌ ನೀಡುವುದಕ್ಕೆ ಹೋಗಿ ಕಟ್ಟಡ ನಿರ್ಮಾಣದ ಹೊಂಡಕ್ಕೆ ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಈ ಘಟನೆ ಮಧ್ಯಪ್ರದೇಶದ ಸಿಯೋನಿಯಲ್ಲಿ ನಡೆದಿದೆ. ಸಾಮಾಜಿಕ ಕಾರ್ಯಕರ್ತರೊಬ್ಬರು ಶ್ರಮದಾನದ ವೇಳೆ ಆರು ಅಡಿಯ ಹೊಂಡಕ್ಕೆ ಬಿದ್ದಿದ್ದಾರೆ.

ಮಹಿಳಾ ಕಾರ್ಮಿಕರೊಬ್ಬರು ಕಾಂಕ್ರೀಟ್‌ ಮಿಶ್ರಣವನ್ನು ಕಟ್ಟಡದ ಅಡಿಪಾಯಕ್ಕೆ ಹಾಕಲು ಕೊಟ್ಟಿದ್ದಾರೆ. ಆದರೆ ಅದನ್ನು ಫೌಂಡೇಶನ್‌ ಹೊಂಡಕ್ಕೆ ಸುರಿದ ಅವರು ಫೋಟೋ ಸರಿ ಬಂದಿಲ್ಲ, ಇನ್ನೊಂದು ಬಾರಿ ತಂದುಕೊಡಿ ಎಂದು ಹೇಳಿದ್ದಾರೆ. ಈ ವೇಳೆ ಕಾರ್ಮಿಕ ಇನ್ನೊಂದು ಸಲ ಕಾಂಕ್ರೀಟ್‌ ಮಿಶ್ರಣವನ್ನು ಆ ವ್ಯಕ್ತಿಯ ಕೈಗೆ ಕೊಟ್ಟಿದ್ದಾನೆ. ಇನ್ನೇನು ಅವರು ಅದನ್ನು ಸುರಿಯಬೇಕು ಎನ್ನುವಷ್ಟರಲ್ಲಿ ಅವರ ಕಾಲಿನ ಕೆಳಭಾಗದ ಮಣ್ಣು ಕುಸಿದು ಹೊಂಡಕ್ಕೆ ಬಿದ್ದಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಇದನ್ನೂ ಓದಿ: Udit Raj: ಶುಭಾಂಶು ಬದಲು ದಲಿತ ಗಗನಯಾತ್ರಿಯನ್ನು ಕಳಿಸಬೇಕಿತ್ತು – ಕಾಂಗ್ರೆಸ್ ನಾಯಕ ಹೇಳಿಕೆ

Comments are closed.