Denotifications of Yediyurappa : ಯಡಿಯೂರಪ್ಪ, ಕುಮಾರಸ್ವಾಮಿ ಅವಧಿಯ 29 ಡಿನೋಟಿಫಿಕೇಶನ್ ರದ್ದು

Denotifications of Yediyurappa : ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರ ಅವಧಿಯಲ್ಲಿ ನಡೆದಿದ್ದ ಒಟ್ಟು 29 ಪ್ರಕರಣಗಳಲ್ಲಿ ಬಿಡಿಎ ಡಿನೋಟಿಫಿಕೇಶನ್‌ಗಳನ್ನು ರದ್ದು ಮಾಡುವ ಕುರಿತು ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ.

ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ. ಈ ಪ್ರಕರಣಗಳಲ್ಲಿ ನಿಯಮಬಾಹಿರವಾಗಿ ಭೂಸ್ವಾಧೀನದಿಂದ ಕೈಬಿಡಲು ಕಾರಣವಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆಯೂ ಸಂಪುಟ ಸಭೆ ನಿರ್ಣಯ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಒಟ್ಟು 29 ಪ್ರಕರಣಗಳಲ್ಲಿ ಭೂಸ್ವಾಧೀನ ಕೈ ಬಿಡಲಾಗಿದೆ. ಈ ಪ್ರಕರಣಗಳಲ್ಲಿ ಎಲ್ಲಾ ಸಂಬಂಧಿಸಿದ ಬಾಧಿತ ವ್ಯಕ್ತಿಗಳಿಗೆ ನೋಟಿಸ್ ನೀಡಿ ವಿವರಣೆ ಪಡೆದು ನಿಯಮಬಾಹಿರವಾಗಿ ಡಿನೋಟಿಫೈ ಮಾಡಿರುವ ಅಧಿಸೂಚನೆಗಳನ್ನು ಹಿಂಪಡೆಯಲು ಸಂಪುಟ ಸಭೆ ನಿರ್ಧರಿಸಿದೆ ಎಂದು ಹೇಳಿದ್ದಾರೆ
2007 ರಿಂದ 2010 ರ ಅವಧಿಯಲ್ಲಿ ನಡೆದ ಡಿನೋಟಿಫಿಕೇಶನ್ ಪ್ರಕರಣಗಳಲ್ಲಿ ಸುಮಾರು 50 ಎಕರೆಗೂ ಹೆಚ್ಚು ಭೂಮಿಯನ್ನು ಬಿಡಿಎ ಸ್ವಾಧೀನದಿಂದ ಕೈ ಬಿಡಲಾಗಿದೆ. ಈ ಕಾನೂನು ಉಲ್ಲಂಘನೆಗಾಗಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Mangalore: ಮಂಗಳೂರಿನಲ್ಲಿ ವಂಚಕನೋರ್ವನ ಅರೆಸ್ಟ್: ಉದ್ಯಮಿಗಳೇ ಈತನ ಟಾರ್ಗೆಟ್
Comments are closed.