Death: ಜೋಕಾಲಿ ಆಡುವ ವೇಳೆ ಮರಣದ ಕುಣಿಕೆಯಾದ ಚೂಡಿದಾರ್ ವೇಲ್: ಬಾಲಕಿ ಸಾವು!

Share the Article

Death: ಭಟ್ಕಳ ತಾಲೂಕಿನ ತೆರ್ನಮಕ್ಕಿಯ ಸಬ್ಬತ್ತಿಯಲ್ಲಿ ಚೂಡಿದಾರ ವೇಲ್ ಸಿಲುಕಿ 12 ವರ್ಷದ ಬಾಲಕಿ ಸಾವನ್ನಪ್ಪಿದ (death) ಘಟನೆ ನಡೆದಿದೆ.

ಪ್ರಣಿತಾ ಜಗನ್ನಾಥ ನಾಯ್ಕ (12) ಮೃತ ಬಾಲಕಿ. ಶಾಲೆಗೆ ರಜೆ ಇದ್ದ ಹಿನ್ನಲೆಯಲ್ಲಿ ಮನೆಯಲ್ಲಿ ಜೋಕಾಲಿ ಆಟ ಆಡುತ್ತಿದ್ದಳು. ಈ ವೇಳೆ ಪ್ರಣಿತಾ ಕುತ್ತಿಗೆಯಲ್ಲಿದ್ದ ವೇಲ್‌ ಜೋಕಾಲಿಗೆ ಸಿಲುಕಿ ತೀವ್ರವಾಗಿ ಅಸ್ವಸ್ಥಗೊಂಡಿದ್ದಳು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ತೆಗೆದುಕೊಂಡು ಹೋಗುವಾಗಲೇ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ. ಈ ಕುರಿತು ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Mangalore: ಮಂಗಳೂರಲ್ಲಿ ಹೆಬ್ಬಾವು ಮಾರಾಟ ಜಾಲ: 4 ಆರೋಪಿಗಳ ಬಂಧನ!

Comments are closed.