Home News Harangi Dam: ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆ – ಸಮಪರ್ಕ ನೀರಿನ ನಿರ್ವಹಣೆ...

Harangi Dam: ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆ – ಸಮಪರ್ಕ ನೀರಿನ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ

Hindu neighbor gifts plot of land

Hindu neighbour gifts land to Muslim journalist

Harangi Dam: ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು ಅವರ ಅಧ್ಯಕ್ಷತೆಯಲ್ಲಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನ ಕಾವೇರಿ ನೀರಾವರಿ ನಿಗಮದ ಕೇಂದ್ರ ಕಚೇರಿಯಲ್ಲಿ ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು.

ಹಾರಂಗಿ ಅಚ್ಚುಕಟ್ಟು ಪ್ರದೇಶಗಳ ಸ್ಥಿತಿಗತಿ, ಜಲಾಶಯದ ಪ್ರಸ್ತುತ ನೀರಿನ ಮಟ್ಟದ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆಯಲಾಯಿತು. ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಯೋಜಿತವಾಗಿ ನಾಲೆಗಳಿಗೆ ನೀರು ಹರಿಸುವ ಮೂಲಕ, ಸಮಪರ್ಕವಾಗಿ ನೀರಿನ ನಿರ್ವಹಣೆಯನ್ನು ಮಾಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಸಭೆಯಲ್ಲಿ ಶಾಸಕರಾದ ಎ.ಮಂಜು, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Bengaluru: 40 ಲಕ್ಷ ವಹಿವಾಟು ದಾಟಿದ ಆರು ಸಾವಿರ ಮಾಲೀಕರಿಗೆ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್‌!