Metro: ಮೆಟ್ರೋದಲ್ಲಿ ಇನ್ಮುಂದೆ ನೆಟ್‌ವರ್ಕ್‌ ಸಮಸ್ಯೆ ಇರಲ್ಲ! ಬಿಎಂಆರ್‌ಸಿಎಲ್ ವೈಫೈ ಲಭ್ಯ!

Share the Article

Metro: ನೆಟ್ವರ್ಕ್ ಸಮಸ್ಯೆ ಉಂಟಾಗುತ್ತಿರುವ ನಮ್ಮ ಮೆಟ್ರೋದ (Metro) ಸುರಂಗ ಮಾರ್ಗಗಳಲ್ಲಿ ವೈಫೈ ಅಳವಡಿಸಲು ಬಿಎಂಆರ್‌ಸಿಎಲ್ ಮುಂದಾಗಿದೆ. ಮೆಟ್ರೋ ಮಾರ್ಗಗಳಲ್ಲಿ ಉಂಟಾಗುವ ನೆಟ್ವರ್ಕ್ ಸಮಸ್ಯೆ ನಿವಾರಣೆಗೆ ಬಿಎಂಆರ್‌ಸಿಎಲ್, ಮೆಟ್ರೋ ನಿಲ್ದಾಣಗಳಲ್ಲಿ ಐಬಿಎಸ್, ಬಿಟಿಎಸ್ ಸೆಲ್ಯುಲಾರ್ ಟವರ್ ಮತ್ತು ಪೋಲ್‌ಗಳನ್ನು ಇಟ್ಟು ವೈಫೈ ಮೂಲಕ ಗ್ರಾಹಕರಿಗೆ 4G, 5G ಸೇವೆ ಒದಗಿಸಲು ಮುಂದಾಗಿದೆ.

ನಮ್ಮ ಮೆಟ್ರೋ ಎರಡನೇ ಹಂತದ ಸುರಂಗ ಹಾಗೂ ಎತ್ತರಿಸಿದ ಮಾರ್ಗದಲ್ಲಿ ನಿರಂತರ ಮತ್ತು ಸುಗಮ ಮೊಬೈಲ್ ಸಂಪರ್ಕ ಒದಗಿಸಲು ಅಡ್ವಾನ್ಸ್ ಕಮ್ಯೂನಿಕೇಶನ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಸಿಸ್ಟಮ್ಸ್ ಕಂಪನಿ ಸಂಸ್ಥೆಯೊಂದಿಗೆ ಬಾಡಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

ಇದನ್ನೂ ಓದಿ: Harangi Dam: ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆ – ಸಮಪರ್ಕ ನೀರಿನ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ

Comments are closed.