Crime: 1ನೇ ಕ್ಲಾಸ್ ವಿದ್ಯಾರ್ಥಿಗೆ ಮನಸೋ ಇಚ್ಛೆ ಥಳಿಸಿರುವ ಶಿಕ್ಷಕಿ!

Share the Article

Crime: ಹಾಸನದ ಖಾಸಗಿ ಶಾಲೆ ಶಿಕ್ಷಕಿ ಹೊಡೆದ ಏಟಿಗೆ ಬಾಲಕ ಆಸ್ಪತ್ರೆ ಸೇರುವಂತಾಗಿದೆ. ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆ ಗ್ರಾಮದ ಖಾಸಗಿ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿರುವ ದಿವಾಕರ್‌ಗೌಡ ಎಂಬ ವಿದ್ಯಾರ್ಥಿಗೆ ಶಿಕ್ಷಕಿ ರಜನಿ ಹೊಡೆದಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಬಾಲಕನಿಗೆ ಹೊಡೆದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಶಿಕ್ಷಕಿಯಿಂದ ಥಳಿತಕ್ಕೊಳಗಾದ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಘಟನೆ ಕುರಿತು ಗಾಯಾಳು ಬಾಲಕನ ಪೋಷಕರು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ.

ಇದನ್ನೂ ಓದಿ: Thyroid: ಸರಿಯಾದ ಆಹಾರ ಸೇವನೆಯಿಂದ ಥೈರಾಯ್ಡ್ ಸಮಸ್ಯೆ ದೂರವಾಗುತ್ತದೆ – ಹಾಗಾದರೆ ಏನು ಆಹಾರ ತಿನ್ನಬೇಕು?

Comments are closed.