Kiran Rijuju: ಸದ್ಯದಲ್ಲೇ ದೇಶದಲ್ಲಿ ಜಾರಿಗೆ ಬರಲಿದೆ ಐತಿಹಾಸಿಕ ಹೊಸ ಕ್ರೀಡಾ ಮಸೂದೆ – ಏನಿದರ ಮಹತ್ವ?

Share the Article

Kiran Rijuju: ಸೋಮವಾರದಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ವೇಳೆ ಐತಿಹಾಸಿಕ ಕ್ರೀಡಾ ಮಸೂದೆಯನ್ನು ಮಂಡಿಸಲು ಕೇಂದ್ರ ಚಿಂತನೆ ನಡೆಸಿದೆ. ಕುರಿತಾಗಿ ಕೇಂದ್ರ ಕ್ರೀಡಾ ಸಚಿವರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಹೌದು, ಕೆಲವೇ ದಿನಗಳಲ್ಲಿ ಆರಂಭವಾಗುವ ಮಳೆಗಾಲದ ಅಧಿವೇಶನದಲ್ಲಿ ಮಂಡಿಸಲಿರುವ ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆಯು ಭಾರತದಲ್ಲಿ ಕ್ರೀಡೆಗೆ ಹೊಸ ಯುಗಕ್ಕೆ ನಾಂದಿ ಹಾಡಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಅಭಿಪ್ರಾಯಪಟ್ಟಿದ್ದಾರೆ.

ಈ ಮಸೂದೆಯು ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳು (ಎನ್‌ಎಸ್‌‍ಎಫ್‌ಗಳು) ಮತ್ತು ಭಾರತೀಯ ಒಲಿಂಪಿಕ್‌ ಸಂಘ (ಐಒಎ)ದಲ್ಲಿ ಉತ್ತಮ ಆಡಳಿತಕ್ಕಾಗಿ ಚೌಕಟ್ಟನ್ನು ರಚಿಸಲು ಪ್ರಯತ್ನಿಸುತ್ತದೆ. ಉತ್ತಮ ಆಡಳಿತಕ್ಕೆ ಸಂಬಂಧಿಸಿದ ನಿಬಂಧನೆಗಳನ್ನು ಅನುಸರಿಸುವ ಆಧಾರದ ಮೇಲೆ ಗಳಿಗೆ ಮಾನ್ಯತೆ ನೀಡುವ ಮತ್ತು ಹಣಕಾಸು ನಿರ್ಧರಿಸುವ ಅಧಿಕಾರವನ್ನು ಹೊಂದಿರುವ ನಿಯಂತ್ರಕ ಮಂಡಳಿಯನ್ನು ಸ್ಥಾಪಿಸುವುದು ಕಡ್ಡಾಯವಾಗಿದೆ.

ಅಲ್ಲದೆ ಆಡಳಿತದಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಮೊಕದ್ದಮೆಗಳನ್ನು ಕಡಿತಗೊಳಿಸಲು ನೀತಿ ಆಯೋಗಗಳು ಮತ್ತು ವಿವಾದ ಪರಿಹಾರ ಆಯೋಗಗಳ ಸ್ಥಾಪನೆಯನ್ನು ಮಸೂದೆಯು ಪ್ರಸ್ತಾಪಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Karnataka High Court: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ಪ್ರಮಾಣ ವಚನ ಸ್ವೀಕಾರ

Comments are closed.