

Rishab Shetty: ರಿಷಬ್ ಶೆಟ್ಟಿ ನಟನೆ-ನಿರ್ದೇಶನದ ಕಾಂತಾರ ಚಾಪ್ಟರ್ -1 ಚಿತ್ರೀಕರಣವನ್ನು ಮುಗಿಸಿದ್ದು, ಇದೀಗ ಈ ಸಿನಿಮಾದ ಮೇಕಿಂಗ್ ವಿಡಿಯೋವನ್ನು ರಿಲೀಸ್ ಮಾಡಲಾಗಿದೆ.
“ನಮ್ಮ ಮಣ್ಣಿನ ಕಥೆಯನ್ನು ಇಡೀ ಪ್ರಪಂಚಕ್ಕೆ ಹೇಳಬೇಕು ಎನ್ನೋದು ನನ್ನ ಕನಸು. 3 ವರ್ಷಗಳ ಪರಿಶ್ರಮ, 250 ದಿನಗಳ ಶೂಟಿಂಗ್, ಎಷ್ಟೇ ಕಷ್ಟಬಂದರೂ ಕೂಡ ನಾನು ನಂಬಿದ ದೈವ ನನ್ನ ಕೈ ಬಿಡಲಿಲ್ಲ. ನನ್ನ ತಂಡ, ನನ್ನ ನಿರ್ಮಾಪಕರು ಕೈ ಬಿಡಲಿಲ್ಲ. ಪ್ರತಿದಿನ ಸೆಟ್‌ನಲ್ಲಿ ಸಾವಿರಾರು ಜನರನ್ನು ನೋಡ್ತಿದ್ದಾಗ ಇದು ಸಿನಿಮಾವಲ್ಲ, ಶಕ್ತಿ ಎನ್ನೋದು ನನಗೆ ಅರ್ಥ ಆಯ್ತು. ಕಾಂತಾರ ಪ್ರಪಂಚಕ್ಕೆ ನಿಮಗೆಲ್ಲರಿಗೂ ಸ್ವಾಗತ” ಎಂದು ರಿಷಬ್ ಶೆಟ್ಟಿ ಅವರು ಹೇಳಿದ್ದಾರೆ.
ಅಕ್ಟೋಬರ್ 2 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದ್ದು, ಕನ್ನಡ, ಹಿಂದಿ, ತೆಲುಗು, ಮಲಯಾಳಂ, ತಮಿಳು, ಬೆಂಗಾಲಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ತೆರೆ ಕಾಣಲಿದೆ.













