Dharmasthala: ಅಪರಾಧ ಕೃತ್ಯಗಳ ತನಿಖೆಗೆ SIT ರಚನೆ ವಿಚಾರ- ಧರ್ಮಸ್ಥಳದಿಂದ ಬಂತು ಪ್ರತಿಕ್ರಿಯೆ- ವರದಿ!

Share the Article

Dharmasthala:  ರಾಜ್ಯಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ್ದ ಧರ್ಮಸ್ಥಳ ಅಪರಾಧ ಪ್ರಕರಣಗಳ ಕುರಿತು ತನಿಖೆ ನಡೆಸಲು ಕೊನೆಗೂ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಈ ಕುರಿತಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಪ್ರತಿಕ್ರಿಯೆ ಬಂದಿದ್ದು ‘ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶ ನೀಡಿದ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಾಗತಿಸಿದೆ. ಸತ್ಯ ಹೊರಬರಬೇಕು. ನ್ಯಾಯಯುತ, ನಿಸ್ಪಕ್ಷಪಾತ ತನಿಖೆಯಾಗಿ ಸತ್ಯವನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು’ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರರು ಹೇಳಿದ್ದಾರೆ ಎಂದು ಪತ್ರಿಕೆಗಳು ವರದಿ ಮಾಡಿವೆ.

ಧರ್ಮಸ್ಥಳದ ಪ್ರತಿಕ್ರಿಯೆ ಏನು?

ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಹಲವಾರು ಶವಗಳನ್ನು ಹೂತಿದ್ದೆ” ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕವಾತರ್ಕಗಳು, ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆಯ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್.ಐ.ಟಿ.) ಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದೆ ಎಂಬುದು ತಿಳಿದು ಬಂದಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ. ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ “ಸತ್ಯ” ಆದ್ದರಿಂದ, ಈ ಪ್ರಕರಣದಲ್ಲಿ ಎಸ್.ಐ.ಟಿ. ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯ” ಎಂಬುದಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ವಕ್ತಾರರ ಮೂಲಕ ಬಂದ ಪ್ರತಿಕ್ರಿಯೆ ಎಂದು ವರದಿಯಾಗಿದೆ.

ಇತ್ತೀಚಿಗಷ್ಟೇ ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದೆ ಎನ್ನಲಾದ  ವ್ಯಕ್ತಿಯೊಬ್ಬ ತಾನು ಹಲವಾರು ಶವಗಳನ್ನು ಹೂತಿಟ್ಟಿದ್ದೆ ಎಂದು ಸ್ವಯಂಪ್ರೇರಿತನಾಗಿ ಪೊಲೀಸ್‌ ಠಾಣೆಗೆ ಶರಣಾಗಿದ್ದ. ಪ್ರಭಾವಿಯೊಬ್ಬರ ಸೂಚನೆಯ ಮೇರೆಗೆ ಕೃತ್ಯವನ್ನು ಎಸೆಗಿದ್ದೆ. ಈಗ ನನಗೆ ಪಾಪಪ್ರಜ್ಞೆ ಕಾಡುತ್ತಿದೆ. ತಾನು ಎಲ್ಲಾ ಸಾಕ್ಷ್ಯಾಧಾರಗಳನ್ನು ನೀಡಲು ಸಿದ್ದವಿದ್ದೇನೆ ಎಂದು ಆತನ ಪೊಲೀಸರ ಬಳಿ ಹೇಳಿದ್ದು, ಇದಕ್ಕೂ ಮುನ್ನ ತಾನು ಈ ಕೃತ್ಯಕ್ಕೆ ಒಪ್ಪದಿದ್ದಾಗ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದು ಹೇಳಿದ್ದ. ಹೀಗಾಗಿ ವಕೀಲರ ನಿಯೋಗವನ್ನು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಎಸ್ಐಟಿ ರಚನೆಗೆ ಆಗ್ರಹಿಸಿತ್ತು. ಇದರ ಬೆನ್ನಲ್ಲೇ ಸರ್ಕಾರವು ಎಸ್ಐಟಿ ರಚಿಸಿ ಆದೇಶ ಹೊರಡಿಸಿದೆ.

Comments are closed.