Jagadeep Dhankar: ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ!

Jagadeep Dhankar: ಭಾರತದ ಉಪರಾಷ್ಟ್ರಪತಿ ಜಗದೀಫ್ ಧನಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ನಾನು ಈ ನಿರ್ಧಾರವನ್ನು ಕೈಗೊಂಡಿದ್ದೇನೆ ಎಂದು ಅವರ ತಿಳಿಸಿದ್ದಾರೆ.

ಹೌದು, ಭಾರತದ ರಾಷ್ಟ್ರಪತಿಗಳಾದ ದ್ರೌಪದಿ ಮುರುಮು ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದವರು ‘ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಭಾರತದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಹೇಳಿದ್ದಾರೆ.
ಅಲ್ಲದೆ ಈ ಮಹತ್ವದ ಅವಧಿಯಲ್ಲಿ ಭಾರತದ ಗಮನಾರ್ಹ ಆರ್ಥಿಕ ಪ್ರಗತಿ ಮತ್ತು ಅಭೂತಪೂರ್ವ ಘಾತೀಯ ಅಭಿವೃದ್ಧಿಯನ್ನು ವೀಕ್ಷಿಸುವುದು ಮತ್ತು ಅದರಲ್ಲಿ ಭಾಗವಹಿಸುವುದು ಒಂದು ಸವಲತ್ತು ಮತ್ತು ತೃಪ್ತಿಯಾಗಿದೆ. ನಮ್ಮ ರಾಷ್ಟ್ರದ ಇತಿಹಾಸದ ಈ ಪರಿವರ್ತನಾ ಯುಗದಲ್ಲಿ ಸೇವೆ ಸಲ್ಲಿಸುವುದು ನಿಜವಾದ ಗೌರವವಾಗಿದೆ ಎಂದು ಅವರು ಹೇಳಿದ್ದಾರೆ.
ಅಲ್ಲದೆ “ಮಾನ್ಯ ಪ್ರಧಾನ ಮಂತ್ರಿಗಳು ಮತ್ತು ಗೌರವಾನ್ವಿತ ಮಂತ್ರಿ ಮಂಡಳಿಗೆ ನಾನು ನನ್ನ ಆಳವಾದ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಪ್ರಧಾನ ಮಂತ್ರಿಯವರ ಸಹಕಾರ ಮತ್ತು ಬೆಂಬಲ ಅಮೂಲ್ಯವಾದುದು, ಮತ್ತು ನಾನು ಅಧಿಕಾರದಲ್ಲಿರುವಾಗ ಬಹಳಷ್ಟು ಕಲಿತಿದ್ದೇನೆ” ಎಂದು ಅವರು ಹೇಳಿದರು.

Comments are closed.