Mangaluru: ಮಂಗಳೂರು: ಅಪ್ರಾಪ್ತ ಬಾಲಕಿಯ ಅಪಹರಿಸಿ ಲೈಂಗಿಕ ಕಿರುಕುಳ: ಇಬ್ಬರ ಬಂಧನ

Mangaluru: ಇನ್‌ಸ್ಟಾಗ್ರಾಮ್ ನಲ್ಲಿ ಪರಿಚಯ ಮಾಡಿಕೊಂಡ ಅಪ್ರಾಪ್ತ ಬಾಲಕಿಯನ್ನು ಮೋಸದಿಂದ ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಉಡುಪಿಯ ಬಡಗುಬೆಟ್ಟುವಿನ ಬಸ್ ಕಂಡಕ್ಟರ್ ದೀಪಕ್ (19) ಮತ್ತು ಆತನ ಸ್ನೇಹಿತ, ಪರ್ಕಳ, ಅತ್ರಾಡಿ ನಿವಾಸಿ ನವೀನ್ ಶೆಟ್ಟಿ (21) ಎಂದು ತಿಳಿದು ಬಂದಿದೆ.
ಆರೋಪಿಗಳು ಜುಲೈ 19 ರಂದು ಬಪ್ಪನಾಡು ಬಳಿಯಿಂದ ಸ್ಕೂಟರ್‌ನಲ್ಲಿ ಬಾಲಕಿಯನ್ನು ಅಪಹರಿಸಿ ಉಡುಪಿಗೆ ಕರೆದುಕೊಂಡು ಹೋಗಿ ಅಲ್ಲಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Sullia: ಸುಳ್ಯದ ವೈದ್ಯ ವಿದ್ಯಾರ್ಥಿ ಕೆರೆಯಲ್ಲಿ ಮುಳುಗಿ ಮೃತ್ಯು!
Comments are closed.