Weather Report: ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ – ಪ್ರಬಲಗೊಂಡರೆ ಮಳೆ ಮುಂದುವರಿಯುವ ಸಾಧ್ಯತೆ!


Weather Report: ಕಳೆದ ಎರಡು ತಿಂಗಳಿನಿಂದ ಒಂದೇ ಸಮನೆ ಕರಾವಳಿ, ಮಲೆನಾಡಿನಲ್ಲಿ ಮಳೆ ಸುರಿಯುತ್ತಿದೆ. ಇನ್ನುಳಿದಂತೆ ರಾಜ್ಯದ ಇತರೇ ಭಾಗಗಳಲ್ಲೂ ಉತ್ತಮ ಮಳೆಯಾಗಿದೆ. ಅಷಾಡ ಕಳೆದಾದರೂ ಮಳೆ ನಿಲ್ಲಬಹುದಾ ಎಂಬ ಚಿಂತೆ ರೈತರನ್ನು ಕಾಡುತ್ತಿದೆ. ಆದರೆ ಮತ್ತೆ ಕರಾವಳಿಯಲ್ಲಿ ಚಂಡಮಾರುತ ಉಂಟಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆ ಮತ್ತೂ ಹೆಚ್ಚಿರುವ ಸಾಧ್ಯತೆಗಳಿವೆ. ಈಗಿನಂತೆ ಜುಲೈ 22ರಿಂದ ಮಳೆಯ ಪ್ರಮಾಣ ಸ್ವಲ್ಪ ಇಳಿಕೆಯಾಗುವ ಲಕ್ಷಣಗಳಿದ್ದು, ಜುಲೈ 30ರಿಂದ ಬಿಸಿಲು ಕಾಣುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಉತ್ತರ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕುದುರೆಮುಖ, ಶಿೃಂಗೇರಿ, ಆಗುಂಬೆ, ಕೊಪ್ಪ, ಬಾಳೆಹೊನ್ನೂರು, ಮೂಡಿಗೆರೆ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರುವ ಸಾಧ್ಯತೆಗಳಿವೆ. ಈಗಿನಂತೆ ಜುಲೈ 22ರಿಂದ ಮಳೆಯ ಕಡಿಮೆಯಾಗುವ ಲಕ್ಷಣಗಳಿದ್ದು, 29ರಿಂದ ಬಿಸಿಲು ಮೂಡಬಹುದು.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ರಾಯಚೂರು – ಆಂದ್ರಾ ಗಡಿಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಮೈಸೂರು ಅಲ್ಲಲ್ಲಿ ತುಂತುರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಉತ್ತರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಜುಲೈ 25ರ ತನಕ ಹಾಗೂ ಉತ್ತರ ಒಳನಾಡಿನಲ್ಲಿ ಜುಲೈ ತಿಂಗಳ 27ರ ತನಕ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆಂದ್ರಾ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮುಂದಿನ ಪರಿಣಾಮ ಕಾದು ನೋಡಬೇಕಾಗಿದೆ. ಪ್ರಭಲಗೊಂಡರೆ ಮಳೆ ಮುಂದುವರಿಯುವ ಸಾಧ್ಯತೆಗಳಿವೆ..ಇದನ್ನೂ ಓದಿ: Agriculture: ರಾಜ್ಯದಲ್ಲಿ ಮಳೆಯಿಂದ ಬೆಳೆ ಹಾನಿ, ಗೊಬ್ಬರ ಕೊರತೆ – ತಲೆಕೆಡಿಸಿಕೊಳ್ಳದ ಸರ್ಕಾರ – ಬಿ ಸಿ ಪಾಟೀಲ್
Comments are closed.