blinkit: ಲಿಫ್ಟ್‌ನಲ್ಲಿ ಮೂತ್ರ ವಿಸರ್ಜಿಸಿದ ಬ್ಲಿಂಕಿಟ್ ಡೆಲಿವರಿ ಬಾಯ್ – ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ


blinkit: ಮುಂಬೈನ ವಿರಾರ್ ವೆಸ್ಟ್‌ನಲ್ಲಿರುವ ವಸತಿ ಕಟ್ಟಡದ ಲಿಫ್ಟ್‌ನಲ್ಲಿ ಬ್ಲಿಂಕಿಟ್ ಡೆಲಿವರಿ ಬಾಯ್ ಮೂತ್ರ ವಿಸರ್ಜನೆ ಮಾಡಿದ್ದಾನೆ. ಲಿಫ್ಟ್‌ನಲ್ಲಿ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಡೆಲಿವರಿ ಬಾಯ್ ಎಡಗೈಯಲ್ಲಿ ಪಾರ್ಸೆಲ್ ಹಿಡಿದು ಲಿಫ್ಟ್ ಒಳಗೆ ಪ್ರವೇಶಿಸುತ್ತಿರುವುದು ಕಂಡುಬಂದಿದೆ. ನಂತರ ಅವನು ತನ್ನ ಪ್ಯಾಂಟ್ ಜಿಪ್ ತೆಗೆದು ಲಿಫ್ಟ್ ಮುಂಭಾಗದಲ್ಲಿರುವ ಗೇಟ್ ಮೇಲೆ ಮೂತ್ರ ವಿಸರ್ಜನೆ ಮಾಡಿ ಕ್ಯಾಮೆರಾದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವ ದೃಶ್ವ ಸಿಸಿಟಿಯಲ್ಲಿ ಸೆರೆಯಾಗಿದೆ.

ಕಟ್ಟಡದ ಇತರ ನಿವಾಸಿಗಳು ಇಲ್ಲದಿದ್ದಾಗ ಮಧ್ಯಾಹ್ನ ಡೆಲಿವರಿ ಬಾಯ್ ಅದರಲ್ಲಿ ಮೂತ್ರ ವಿಸರ್ಜಿಸುತ್ತಿರುವುದು ಕಂಡುಬಂದಿದೆ. ಇದರ ನಂತರ, ಕೆಲವರು ಆತನನ್ನು ಥಳಿಸಿದ್ದಾರೆ ಎಂದು ತಿಳಿದು ಬಂದಿದೆ. ಕಟ್ಟಡದ ಜನರು ಬ್ಲಿಂಕಿಟ್‌ನ ಸ್ಥಳೀಯ ಕಚೇರಿಗೆ ತಲುಪಿ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಬಗ್ಗೆ ವಿರಾರ್ ಪಶ್ಚಿಮದಲ್ಲಿರುವ ಬೊಲಿಂಜ್ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಾಗಿದೆ. ಪೊಲೀಸ್ ಅಧಿಕಾರಿಗಳು ಘಟನೆಯನ್ನು ದೃಢಪಡಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಪ್ರಸ್ತುತ, ಈ ವಿಷಯದಲ್ಲಿ ಬ್ಲಿಂಕಿಟ್‌ನಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಈ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿಯೂ ವೈರಲ್ ಆಗಿದ್ದು, ಜನರು ಈ ಅಸಭ್ಯ ವರ್ತನೆಯನ್ನು ತೀವ್ರವಾಗಿ ಖಂಡಿಸುತ್ತಿದ್ದಾರೆ.
ಇದನ್ನೂ ಓದಿ: Kerala: ಕೇರಳದ ಪ್ರಮುಖ ಹಿಂದೂ ಈಳವ ಸಮುದಾಯದ ನಾಯಕ ವೆಲ್ಲಪಲ್ಲಿ ನಟೇಶನ್ ವಿವಾದಾತ್ಮಕ ಹೇಳಿಕೆ

Comments are closed.