Home News Agriculture: ರೈತರಿಗೆ ಸಿಹಿಸುದ್ದಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ

Agriculture: ರೈತರಿಗೆ ಸಿಹಿಸುದ್ದಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ

Hindu neighbor gifts plot of land

Hindu neighbour gifts land to Muslim journalist

Agriculture: ಪ್ರಸಕ್ತ (2025-26) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿರುತ್ತದೆ.

ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ಅರ್ಜಿಯನ್ನು ರೈತ ಸಂಪರ್ಕ ಕೇಂದ್ರದಿಂದ ಪಡೆದು ತಮ್ಮ ಅರ್ಜಿಯೊಂದಿಗೆ ಪಹಣಿ (ಆರ್ಟಿ ಸಿ), ಆಧಾರ್ ಕಾರ್ಡ್ನದ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ, ರೂ.100 ಛಾಪಾಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕೋರಿದೆ.

ಕೃಷಿ ಉಪಕರಣಗಳಾದ ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂ.ಬಿ.ಪ್ಲೂ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ, ಮೆಣಸಿನ ಕಾಯಿ ಪುಡಿ ಮಾಡುವ ಯಂತ್ರ ಹಾಗೂ ವಿವಿಧ ಬಗೆಯ ಎಣ್ಣೆ ಗಾಣಗಳನ್ನು ಶೇ.50ರ ಸಹಾಯಧನದಲ್ಲಿ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನ ರೈತರು ಪಡೆದುಕೊಳ್ಳಲು ಅರ್ಜಿಯನ್ನು ಆಯಾಯ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಸಲ್ಲಿಸುವಂತೆ ಸೋಮವಾರಪೇಟೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ: Urea Problem: ರಾಜ್ಯದಲ್ಲಿ ಯೂರಿಯಾ ಕೊರತೆ ವಿಚಾರ : ರೈತರು ಆತಂಕ ಪಡುವ ಅಗತ್ಯ ಇಲ್ಲ – ಯೂರಿಯಾ ಗೊಬ್ಬರ ಸ್ಟಾಕ್ ಇದೆ – ಕೃಷಿ ಸಚಿವ