Raichur: ಪತಿಯನ್ನ ಪತ್ನಿ ನದಿಗೆ ತಳ್ಳಿದ ಆರೋಪ ಪ್ರಕರಣ: ಪತಿ ತಾತಪ್ಪ ವಿರುದ್ಧ ಮಹಿಳಾ ಠಾಣೆಯಲ್ಲಿ ಕೇಸು ದಾಖಲು

Raichur: ಜಿಲ್ಲೆಯ ಗುರ್ಜಾಪುರ ಬ್ಯಾರೇಜ್ ಬಳಿ ನಡೆದಿದ್ದ ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನ ಪತ್ನಿ ನದಿಗೆ ತಳ್ಳಿದ ಆರೋಪದಲ್ಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಗ್ ಟ್ವಿಸ್ಟ್ ದೊರಕಿದೆ. ಇದೀಗ ಪತಿ ತಾತಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.

15 ವರ್ಷ, 8 ತಿಂಗಳ ಅಪ್ರಾಪ್ತೆಯನ್ನು ಮದುವೆಯಾಗಿರುವುದರಿಂದ ಇದು ದೃಢವಾದ ಹಿನ್ನೆಲೆಯಲ್ಲಿ ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಗಂಡ ತಾತಪ್ಪ ಹಾಗೂ ಆತನ ತಾಯಿ ಮತ್ತು ಅಪ್ರಾಪ್ತೆಯ ತಾಯಿ ಸೇರಿ ಒಟ್ಟು ಮೂರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ರಾಯಚೂರು ಹಾಗೂ ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಪ್ರಕರಣ ದಾಖಲು ಮಾಡಲು ಸೂಚನೆ ನೀಡಲಾಗಿತ್ತು. ಇದೀಗ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ದೇವಸುಗೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿಕುಮಾರ್ ದೂರು ದಾಖಲು ಮಾಡಿದ್ದಾರೆ.
Comments are closed.