Rape Case: ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ – ಇಂದು ಜಾಮೀನು ಅರ್ಜಿ ವಿಚಾರಣೆ

Rape Case: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಸಂಬಂಧಪಟ್ಟಂತೆ ಇಂದು ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದೆ. ಹೈಕೋರ್ಟ್ ಸೂಚನೆ ಮೇರೆಗೆ ಮತ್ತೆ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಸಂಬಂಧ ಎಸ್ಪಿಪಿ ಆಕ್ಷೇಪಣೆ ಸಲ್ಲಿಸಿದ್ದರು. ಅದರ ಅರ್ಜಿ ಸಂಬಂಧ ಇಂದು ವಾದ ಪ್ರತಿವಾದ ನಡೆಯಲಿದೆ.

ಜೂನ್ 30ರಂದು ಪ್ರಜ್ವಲ್ ರೇವಣ್ಣನಿಗೆ ಜಾಮೀನು ಸಿಗುತ್ತಾ ಇಲ್ಲಾ ಜೈಲೇ ಗತಿಯಾ ಎಂಬುದನ್ನು ಕೋರ್ಟ್ ನಿರ್ಧರಿಸಲಿದೆ. ಅಂದು ಜಾಮೀನು ಅರ್ಜಿಯ ಫೈನಲ್ ತೀರ್ಪುನ್ನು ನೀಡಲಿದೆ. ಮೈಸೂರಿನ ಕೆ.ಆರ್ ನಗರ ಮಹಿಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಮೇಲೆ ಅತ್ಯಾಚಾರ ಆರೋಪ ಪ್ರಕರಣದ ವಾದ ಮಂಡನೆ ಪೂರ್ಣಗೊಂಡಿದೆ. ಪ್ರಾಸಿಕ್ಯೂಷನ್ ಪರ SPP ಬಿ.ಎನ್.ಜಗದೀಶ್, ಅಶೋಕ್ ನಾಯ್ಕ್ ವಾದ ಮಂಡಿಸಿದ್ದರು, ಹಾಗೂ ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ ನಳಿನಾ ಮಾಯಗೌಡ ಪ್ರತಿವಾದ ಮಂಡಿಸಿದ್ದರು. ಇನ್ನು ಈ ವಾದ ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ ಗಜಾನನ ಭಟ್ ಆದೇಶವನ್ನು ಕಾಯ್ದಿರಿಸಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Bengaluru Special Court) ಈ ಪ್ರಕರಣದ ತೀರ್ಪುನ್ನು ಜೂನ್ 30ರಂದು ಪ್ರಕಟಿಸಲಿದ್ದು, ಪ್ರಜ್ವಲ್ ರೇವಣ್ಣಗೆ ಎದೆ ಢವ ಢವ ಶುರುವಾಗಿದೆ.
ಕೋರ್ಟ್ ಏನು ತೀರ್ಪು ನೀಡುತ್ತೆ ಅದರ ಮೇಲೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರವಾಗಲಿದೆ. ಒಂದು ವೇಳೆ ಕೋರ್ಟ್, ಪ್ರಜ್ವಲ್ ರೇವಣ್ಣನನ್ನು ದೋಷಿ ಎಂದು ತೀರ್ಪು ನೀಡಿದರೆ ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆ ಆಗಲಿದೆ. ಇನ್ನು ಈ ಮೈಸೂರು ಜಿಲ್ಲೆಯ ಕೆಆರ್ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಮಾತ್ರವಲ್ಲದೆ, ಎಚ್ ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದಾರೆ. ಈಗಾಗಲೇ ಹೆಚ್ ಡಿ ರೇವಣ್ಣ ಹಾಗೂ ಭವಾನಿ ರೇವಣ್ಣ ಅವರು ಜಾಮೀನು ಸಿಕ್ಕಿದೆ. ಆದ್ರೆ, ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಮಾತ್ರ ಕಳೆದ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ ಮುದ್ದೆ ಮುರಿತಿದ್ದಾರೆ.
Comments are closed.