Mangalore: 24 ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ!

Share the Article

Mangalore: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ವಿಚಾರಣೆ ಸಮಯದಲ್ಲಿ ಆರೋಪಿಯೋರ್ವನನ್ನು ತಲೆಮರೆಸಿಕೊಂಡಿದ್ದ ಜು. 22ರಂದು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್‌ ಠಾಣೆಗೆ ಹಸ್ತಾಂತರಿಸಿದ್ದಾರೆ

ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ ಕಳ್ಳತನ, ಕೊಲೆಯತ್ನ, ಕಾರಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಮಂಜನಾಡಿ ಬಟ್ಯಡ್ಕ ಮೊಹಮ್ಮದ್ అబ్దులో ಫಯಾನ್(27) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್‌ ಠಾಣೆಗೆ ಹಸ್ತಾಂತರಿಸಿದ್ದಾರೆ.

Comments are closed.