Belthangady: ಬೆಳ್ತಂಗಡಿ: ನಕ್ಸಲ್ ನಾಯಕ ರೂಪೇಶ್ 3 ದಿನ ಪೊಲೀಸ್‌ ಕಸ್ಟಡಿಗೆ!

Share the Article

Belthangady: ಕೇರಳ ಜೈಲಿನಲ್ಲಿದ್ದ ನಕ್ಸಲ್ ನಾಯಕ ರೂಪೇಶ್.ಪಿ.ಆ‌ರ್ ನನ್ನು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ (Belthangady) ಪೊಲೀಸರು ವಶಕ್ಕೆ ಪಡೆದು ಬೆಳ್ತಂಗಡಿ ನ್ಯಾಯಾಲಯಕ್ಕೆ ಜು.22ರಂದು ಹಾಜರುಪಡಿಸಿದ್ದು, ನ್ಯಾಯಾಲಯ ಮೂರು ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.

ತನಿಖಾಧಿಕಾರಿಯಾಗಿರುವ ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರು ಭದ್ರತೆಯಲ್ಲಿ ಮಿತ್ತಬಾಗಿಲು ಗ್ರಾಮದ ಬೊಳ್ಳೆ ಪ್ರದೇಶದಲ್ಲಿ ಮಹಜರು ಪಕ್ರಿಯೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತನಿಖೆ ನಡೆಸಿ ಬಳಿಕ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ವಾಪಸ್ ಕೇರಳ ಜೈಲಿಗೆ ಕಳುಹಿಸಲಿದ್ದಾರೆ ಎಂದು ತಿಳಿದುಬಂದಿದೆ.

Comments are closed.