RCB: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: RCB ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಕ್ಯಾಬಿನೆಟ್‌ ಒಪ್ಪಿಗೆ!

Share the Article

RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನ ಮುಡಿಗೇರಿಸಿಕೊಂಡಿತ್ತು. ಅಂತೆಯೇ ಆರ್‌ಸಿಬಿ ಫ್ಯಾನ್ಸ್‌ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಜೂ.4 ಸಂಭ್ರಮಾಚರಣೆಗೆ ಬಂದಿದ್ದಾಗ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ 11 ಮಂದಿ ಸಾವಿಗೀಡಾಗಿದ್ದರು. ಉಚಿತ ಪ್ರವೇಶ ಘೋಷಣೆಯಿಂದ ಮಿತಿಮೀರಿದ ಜನ ಬಂದಿದ್ದರಿಂದ ಈ ಅವಘಡ ನಡೆದಿತ್ತು.

ಇದೀಗ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ (Chinnaswamy Stampede Case) ಸಂಬಂಧಿಸಿದಂತೆ ನ್ಯಾ.ಕುನ್ಹಾ ವರದಿ ಶಿಫಾರಸು ಜಾರಿಗೆ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. ಅರ್‌ಸಿಬಿ (RCB), ಕೆಎಸ್‍ಸಿಎ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕ್ಯಾಬಿನೆಟ್ ಅಧಿಕೃತ ಒಪ್ಪಿಗೆ ಸೂಚಿಸಿದೆ.

ಈ ಪ್ರಕರಣದಲ್ಲಿ ಪೊಲೀಸರ ತಪ್ಪಿದೆ. ಅವರ ವಿರುದ್ಧ ಸಹ ಇಲಾಖಾ ತನಿಖೆ ಆಗಬೇಕು ಎಂದು ಸಚಿವರು ಒಮ್ಮತದ ಒಪ್ಪಿಗೆ ಸೂಚಿಸಿದ್ದಾರೆ. ಅಲ್ಲದೇ ಡಿಎನ್‍ಎ ವಿರುದ್ಧವೂ ಕ್ರಿಮಿನಲ್ ಕೇಸ್ ದಾಖಲಿಸಲು ಸಂಪುಟ ಒಪ್ಪಿಗೆ ಸೂಚಿಸಿದೆ.

ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ನೇತೃತ್ವದ ಏಕಸದಸ್ಯ ತನಿಖಾ ಆಯೋಗವು ಐಪಿಎಲ್ ವಿಜಯೋತ್ಸವದ ಸಮಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ತನಿಖಾ ವರದಿಯನ್ನು ಜುಲೈ 12 ರಂದು ಸರ್ಕಾರಕ್ಕೆ ಸಲ್ಲಿಸಿತ್ತು. ಆರ್‌ಸಿಬಿಯ ಜೊತೆ ಬೆಂಗಳೂರು ಪೊಲೀಸರು (Bengaluru Police) ಶಾಮೀಲಾಗಿರುವ ಕಾರಣ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಇದನ್ನೂ ಓದಿ: Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ : ವಾಯುಭಾರ ಕುಸಿತ ದುರ್ಬಲಗೊಳ್ಳುತ್ತಿದ್ದಂತೆಯೇ ಮುಂಗಾರು ತಗ್ಗುವ ಸಾಧ್ಯತೆ

Comments are closed.