ಭಾರೀ ಮಳೆ: ಇಂದು (ಜು.24) ಉಡುಪಿ ಜಿಲ್ಲೆ ಮತ್ತು ದ.ಕ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ

Share the Article

ಮಂಗಳೂರು/ಉಡುಪಿ: ಕರಾವಳಿಯಲ್ಲಿ ವಿಪರೀತ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜುಲೈ 24) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ, ಖಾಸಗಿ ವಿದ್ಯಾಸಂಸ್ಥೆ, ಪದವಿ ಪೂರ್ವ ಕಾಲೇಜು ಮತ್ತು ಐಟಿಐ ಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಎಲ್ಲಾ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಇರಲ್ಲ.

ಇನ್ನು, ದ.ಕ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತೆಯಾಗಿ, ಇಂದು ಜು.24ರ ಗುರುವಾರ ಮುಲ್ಕಿ, ಮೂಡುಬಿದಿರೆ ಹಾಗೂ ಮಂಗಳೂರು, ಕಡಬ ಮತ್ತು ಪುತ್ತೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಮುಂದಿನ ದಿನಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆವಿದೆ ಎನ್ನಲಾಗಿದೆ.

Comments are closed.